ಐಟಿ-ಬಿಟಿ ಸ್ಟಾರ್ಟ್‌ಅಪ್‌ ಇನ್‌ಕ್ಯೂಬೇಷನ್ ಕೇಂದ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ರಾಜ್ಯದ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಸುಮಾರು 34 ಕೋಟಿ ರೂ. ವೆಚ್ಚದಲ್ಲಿ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನಿರ್ಮಿಸಿರುವ ಸುಸಜ್ಜಿತ ಐಟಿ-ಬಿಟಿ ಸ್ಟಾರ್ಟ್‌ಅಪ್ ಮತ್ತು ಇನ್‌ಕ್ಯೂಬೇಷನ್ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಲೋಕಾರ್ಪಣೆ ಮಾಡಿದರು.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಸುಮಾರು 34 ಕೋಟಿ ರೂ. ವೆಚ್ಚದಲ್ಲಿ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ನಿರ್ಮಿಸಿರುವ ಸುಸಜ್ಜಿತ ಐಟಿ-ಬಿಟಿ ಸ್ಟಾರ್ಟ್‌ಅಪ್ ಮತ್ತು ಇನ್‌ಕ್ಯೂಬೇಷನ್ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಲೋಕಾರ್ಪಣೆ ಮಾಡಿದರು.

ಎಚ್‌ಎಸ್‌ಆರ್‌ ಬಡಾವಣೆಯಲ್ಲಿ 75,000 ಚದರ ಅಡಿ ವಿಸ್ತೀರ್ಣದಲ್ಲಿ ಈ ಕೇಂದ್ರವನ್ನು ತೆರೆಯಲಾಗಿದೆ.ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್) ಇದನ್ನು ಅಭಿವೃದ್ಧಿಪಡಿಸಿದೆ. ಇದರಿಂದ ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಕೈಗಾರಿಕೆಗಳನ್ನು ಉತ್ತೇಜಿಸುವ ನಮ್ಮ ಗುರಿಗೆ ಮತ್ತಷ್ಟು ವೇಗ ಬರಲಿದೆ ಎಂದು ಯಡಿಯೂರಪ್ಪ ಹೇಳಿದರು.

ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರಕಿಸಿಕೊಡಲು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ದಿಮೆಗಳು ನೆಲೆಗೊಳ್ಳುವಂತೆ ಮಾಡಲು ಸರ್ಕಾರ ಬದ್ಧವಾಗಿದ್ದು, ಈ ದಿಸೆಯಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. 

ಹುಬ್ಬಳ್ಳಿಯಲ್ಲಿ ಈಗಾಗಲೇ ಸಾಕಷ್ಟು ವ್ಯವಸ್ಥೆಗಳು ಅಭಿವೃದ್ಧಿಗೊಂಡಿದ್ದು, ಇದೇ ರೀತಿಯಲ್ಲಿಯೇ ಕಲಬುರಗಿ, ಶಿವಮೊಗ್ಗ ಹಾಗೂ ಇತರೆ ಸಣ್ಣನಗರಗಳನ್ನೂ ಅಭಿವೃದ್ಧಿಗೊಳ್ಳುವಂತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆರಂಭದಲ್ಲಿ ನಾವು ಈ ಯತ್ನದಲ್ಲಿ ಯಶಸ್ಸು ಗಳಿಸಿರಲಿಲ್ಲ. ಆದರೂ ಪ್ರಯತ್ನ ಕೈಬಿಡದೆ, ಕಠಿಣ ಶ್ರಮ ಪಡುತ್ತಿದ್ದೇನೆ. 

ಮೈಸೂರು ಹಾಗೂ ಮಂಗಳೂರಿನಲ್ಲಿರುವ ಐಟಿ, ಬಿಟಿ ವಿಭಾಗಗಳಿಂದ ಉತ್ತಮ ಫಲಿತಾಂಶ ಬರುತ್ತಿವೆ.  ಇದೇ ರೀತಿ ಇತರೆ ನಗರಗಳಲ್ಲೂ ಕಾರ್ಯಕೈಗೊಳ್ಳುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com