ಆಸ್ಪತ್ರೆಗಳ ನಿರ್ಲಕ್ಷ್ಯ: ಕೊರೋನಾ ಸೋಂಕಿಗೊಳಗಾಗಿದ್ದ ವಿಕಲಚೇತನ ಯುವತಿ ಸಾವು!

ಆಸ್ಪತ್ರೆಗಳ ನಿರ್ಲಕ್ಷ್ಯದಿಂದಾಗಿ  ಕೊರೋನಾ ಸೋಂಕಿಗೊಳಗಾಗಿ ಬಳಲುತ್ತಿದ್ದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಮಗಳೂರು: ಆಸ್ಪತ್ರೆಗಳ ನಿರ್ಲಕ್ಷ್ಯದಿಂದಾಗಿ  ಕೊರೋನಾ ಸೋಂಕಿಗೊಳಗಾಗಿ ಬಳಲುತ್ತಿದ್ದ 20 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರಿನ ಗೌರಿ ಕಾಲುವೆ ನಿವಾಸಿಯಾಗಿರುವ ಯುವತಿ ಬಿ.ಕಾಂ ಅಂತಿಮ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದಳು. ಕಳೆದ ಶುಕ್ರವಾರ ಯುವತಿ ಅಸ್ವಸ್ಥಗೊಂಡಿದ್ದಾಳೆ. ಕೂಡಲೇ ಕುಟುಂಬ ಸದಸ್ಯರು ಆಕೆಯನ್ನು ಖಾಸಿಗ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಈ ವೇಳೆ ಕೊರೋನಾ ಇರುವುದಾಗಿ ಶಂಕಿಸಿ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಸುತ್ತಿದ ಕುಟುಂಬಸ್ಥರು ಅಂತಿಮವಾಗಿ ಕೆಆರ್ಎಸ್ ಆಸ್ಪತ್ರೆಗೆ ಕರೆತಂದಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ ಅಲ್ಲಿಂದ ಜಿಲ್ಲಾ ಆಸ್ಪತ್ರೆಗೆ ಕರೆತಂದು ಕೊರೋನಾ ಪರೀಕ್ಷೆ ಮಾಡಿಸಿದ್ದಾರೆ. 

ಅಷ್ಟರಲ್ಲಾಗಲೇ ಯುವತಿಯ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿತ್ತು. ಮತ್ತೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಯುವತಿ ಸಾವನ್ನಪ್ಪಿದ್ದಾಳೆ. ಬಳಿಕ ಯುವತಿಯ ವೈದ್ಯಕೀಯ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಬಂದಿದೆ. ಇನ್ನು ಯುವತಿಯ ಪೋಷಕರನ್ನೂ ಕೂಡ ಪರೀಕ್ಷೆಗೊಳಪಡಿಸಲಾಗಿದ್ದು, ಅವರಲ್ಲೂ ಕೊರೋನಾ ಇರುವುದು ದೃಢಪಟ್ಟಿದೆ. 

ಮೃತಪಟ್ಟ ಯುವತಿಯ ಮೃತದೇಹವನ್ನು ಸರ್ಕಾರದ ಮಾರ್ಗಸೂಚಿಗಳಂತೆ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಯುವತಿಗೆ ಈ ಹಿಂದೆ ಕೂಡ ಕೊರೋನಾ ಪರೀಕ್ಷೆ ಮಾಡಿಸಲಾಗಿದ್ದು, ಈ ವೇಳೆ ವೈದ್ಯಕೀಯ ವರದಿಯಲ್ಲಿ ಕೊರೋನಾ ಇಲ್ಲ ಎಂದು ಹೇಳಲಾಗಿತ್ತು. ಕುಟುಂಬ ಸದಸ್ಯರಿಗಾರಿಗೂ ಕೊರೋನಾ ಲಕ್ಷಣಗಳಿಲ್ಲ. ಯುವತಿಗೆ ಹೇಗೆ ಕೊರೋನಾ ಸೋಂಕು ತಗುಲಿತ್ತು ಎಂಬುದು ತಿಳಿಯುತ್ತಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. 

ತಾಂತ್ರಿಕ ದೋಷಗಳಿಂದಾಗಿ ಈ ರೀತಿಯಾಗಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com