ಕೋವಿಡ್-19 ರೋಗಿಗಳಿಗೆ ಶೇ.50ರಷ್ಟು ಬೆಡ್ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:ಸಚಿವ ಶ್ರೀರಾಮುಲು

ಸರ್ಕಾರದ ನಿಯಮ ಮೀರಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಮುಂದುವರಿದಿದೆ. ಬೆಂಗಳೂರಿನಲ್ಲಿ ಶೇಕಡಾ 50ರಷ್ಟು ಕೋವಿಡ್-19 ರೋಗಿಗಳಿಗೆ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸಲಾಗಿದ್ದು, ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸರ್ಕಾರದ ನಿಯಮ ಮೀರಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಮುಂದುವರಿದಿದೆ. ಬೆಂಗಳೂರಿನಲ್ಲಿ ಶೇಕಡಾ 50ರಷ್ಟು ಕೋವಿಡ್-19 ರೋಗಿಗಳಿಗೆ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸಲಾಗಿದ್ದು, ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 58ರಡಿ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸಲಾಗಿದ್ದು ಆ ಆಸ್ಪತ್ರೆಗಳ ಪರವಾನಗಿ ರದ್ದು ಮಾಡುವ ಬ್ಯಾನರ್ ನ್ನು ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಆದರೂ ಈಗಿರುವ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆಗಳಿಗೆ ಅವಕಾಶ ನೀಡಲಾಗಿದೆ.

ಅನುಗ್ರಹ ವಿಟ್ಟಲ ಆಸ್ಪತ್ರೆ, ವಿನಾಯಕ ಆಸ್ಪತ್ರೆ, ಪ್ರಶಾಂತ್ ಆಸ್ಪತ್ರೆ ಮತ್ತು ರಾಧಾಕೃಷ್ಣ ಆಸ್ಪತ್ರೆ (ಬಸವನಗುಡಿ ಉಪ ವಿಭಾಗದಲ್ಲಿ), ಗುರುಶ್ರೀ ಆಸ್ಪತ್ರೆ, ಕಲಾಭೈರೇಶ್ವರ ಆಸ್ಪತ್ರೆ, ಪದ್ಮಶ್ರೀ ಆಸ್ಪತ್ರೆ, ಮಾರುತಿ ಆಸ್ಪತ್ರೆ (ವಿಜಯನಗರ ಉಪ ವಿಭಾಗ), ಪ್ರೋಮ್ಡ್ ಆಸ್ಪತ್ರೆ, ಎನ್‌ಯು ಆಸ್ಪತ್ರೆ, ದೀಪಕ್ ಆಸ್ಪತ್ರೆ, ಸೇವಾಕ್ಷೇತ್ರ ಆಸ್ಪತ್ರೆ ಮತ್ತು ಉದ್ಧವ ಆಸ್ಪತ್ರೆ (ಪದ್ಮನಾಭನಗರ ಉಪ ವಿಭಾಗ), ಗಂಗೋತ್ರಿ ಆಸ್ಪತ್ರೆ, ಅಕುರಾ ಆಸ್ಪತ್ರೆ ಮತ್ತು ಕರಂತ್ ಆಸ್ಪತ್ರೆ (ಬಿಟಿಎಂ ಲೇ ಔಟ್ ಉಪ ವಿಭಾಗ) ಮತ್ತು ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆ, ಟ್ರಿನಿಟಿ ಆಸ್ಪತ್ರೆ ಮತ್ತು ಮೈಯಾ ಆಸ್ಪತ್ರೆ (ಚಿಕ್ಕಪೇಟೆ ಉಪ ವಿಭಾಗ)ಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ.

ಇನ್ನೊಂದೆಡೆ, ರಾಜ್ಯ ಸರ್ಕಾರ ನಿನ್ನೆ ಬೆಂಗಳೂರಿನ ಮಾರತ್ ಹಳ್ಳಿಯ ಸಾಕ್ರ ಖಾಸಗಿ ಆಸ್ಪತ್ರೆ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. ಆಸ್ಪತ್ರೆಯ ಮೂವರು ಮುಖ್ಯಸ್ಥರನ್ನು ಆರೋಪಿಗಳಾಗಿ ಹೊಣೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಕೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com