ಸಿಎಂ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್ ಆಸ್ಪತ್ರೆ

ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. 

ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈದ್ಯರ ಸಲಹೆಗಳ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. 

ಯಡಿಯೂರಪ್ಪ ಆರೋಗ್ಯ ಕುರಿತಂತೆ ಇದೀಗ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಯಡಿಯೂರಪ್ಪ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ನಮ್ಮ ತಂಡ ಬಹಳ ಹತ್ತಿರದಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮತ್ತು ಸಿಎಂ ಪುತ್ರ ಬಿ ಟಿ ವಿಜಯಂದ್ರ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿದ್ದ ಯಡಿಯೂರಪ್ಪ ಅವರು ಪ್ರತಿನಿತ್ಯ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಶ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದ ಕಾರಣ ಪ್ರತಿ ವಾರವೂ ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅವರಿಗೆ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿದುಬಂದಿದೆ.

ಇದರೊಂದಿಗೆ ಯಡಿಯೂರಪ್ಪ ಅವರು ಕೋವಿಡ್ ಸೋಂಕಿಗೆ ಒಳಗಾದ ದೇಶದ 2ನೇ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪಾಟಿಸಿವ್ ಬಂದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com