ಮಂಡ್ಯ: ಕೊರೋನಾ ಗೆದ್ದ ಕೆರೆ ಕಾಮೇಗೌಡ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಡ್ಯದಲ್ಲಿ ಹಲವು ಕೆರೆಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರು ಕೆರೆ ಕಾಮೇಗೌಡರು ಮಹಾಮಾರಿ ಕೊರೋನಾ ವೈರಸ್ ಜಯಿಸಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

Published: 03rd August 2020 04:43 PM  |   Last Updated: 03rd August 2020 04:43 PM   |  A+A-


kamegowda1

ಕಾಮೇಗೌಡರನ್ನು ಬಿಳ್ಕೋಡುತ್ತಿರುವ ಜಿಲ್ಲಾಧಿಕಾರಿ

Posted By : Lingaraj Badiger
Source : The New Indian Express

ಮಂಡ್ಯ: ಮಂಡ್ಯದಲ್ಲಿ ಹಲವು ಕೆರೆಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರು ಕೆರೆ ಕಾಮೇಗೌಡರು ಮಹಾಮಾರಿ ಕೊರೋನಾ ವೈರಸ್ ಜಯಿಸಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

10 ದಿನಗಳ ಹಿಂದೆ ಕಾಮೇಗೌಡ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಅವರನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಮಂಡ್ಯ ಜಿಲ್ಲಾಧಿಕಾರಿ ಡಿಸಿ ವೆಂಕಟೇಶ್ ಅವರ ನೇತೃತ್ವದಲ್ಲಿ ಕಾಮೇಗೌಡರನ್ನು ಬಿಳ್ಕೋಡಲಾಯಿತು.

ಕಾಲು ನೋವಿನಿಂದ ಬಳಲುತ್ತಿದ್ದ ಕಾಮೇಗೌಡರು ಆಸ್ಪತ್ರೆಗಳಿಗೆ ಓಡಾಡುತ್ತಿದ್ದ ವೇಳೆ ಅವರಿಗೆ ಕೊರೋನಾ ಸೋಂಕು ತಗುಲಿತ್ತು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿಯಾಗಿರುವ ಕಾಮೇಗೌಡರು, ಗ್ರಾಮದಲ್ಲಿ ಹಲವು ಕೆರೆ, ಕಟ್ಟೆಗಳನ್ನು ನಿರ್ಮಿಸಿ ಖ್ಯಾತಿ ಗಳಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್‍ನಲ್ಲಿ ಕಾಮೇಗೌಡರ ಕೆರೆ ಕಟ್ಟುವ ಕಾರ್ಯವನ್ನು ಮುಕ್ತವಾಗಿ ಶ್ಲಾಘಿಸಿದ್ದರು. ಇಂಥವರು ದೇಶದಲ್ಲಿರುವುದು ನಿಜಕ್ಕೂ ನಮ್ಮ ಪುಣ್ಯ ಎಂದಿದ್ದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp