ಬಿಎಸ್ ವೈ, ಸಿದ್ದರಾಮಯ್ಯ ಬಳಿಕ ಮಾಜಿ ಸಚಿವ ಹರತಾಳು ಹಾಲಪ್ಪಗೂ ಕೊರೋನಾ ಸೋಂಕು

ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳ ಹಾಲಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದೆ.

Published: 04th August 2020 06:55 PM  |   Last Updated: 04th August 2020 07:13 PM   |  A+A-


Harthala halappa

ಹರತಾಳ ಹಾಲಪ್ಪ

Posted By : Vishwanath S
Source : UNI

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳ ಹಾಲಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಶಾಸಕರು, ಅವರ ಪತ್ನಿ, ಕಾರು ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ಶಾಸಕರು ಸಾಮಾಜಿಕ ಜಾಲ ತಾಣದಲ್ಲಿ ತಿಳಿಸಿದ್ದಾರೆ. 

ಸೋಂಕು ಧೃಡಪಟ್ಟ ಹಿನ್ನಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಶಾಸಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮೊಂದಿಗೆ ಸಂಪರ್ಕದಲ್ಲಿ ಇದ್ದವರು ಕೂಡಲೇ ಕ್ವಾರಂಟೈನ್ ಆಗಬೇಕು, ಜೊತೆಗೆ ಕೊರೋನಾ ಪರೀಕ್ಷೆ ಮಾಡಿ ಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. 

ಎಂಎಸ್​ಐಎಲ್ ನಿಗಮ ಮಂಡಳಿ ಅಧ್ಯಕ್ಷರಾಗಿ ಇತ್ತೀಚಗೆ ಅಧಿಕಾರ ವಹಿಸಿಕೊಂಡಿದ್ದರು. ಸರ್ಕಾರ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಲ ದಿನಗಳು ಹಾಲಪ್ಪ ಅವರು ಯಾರನ್ನೂ ಭೇಟಿ ಮಾಡಿರಲಿಲ್ಲ ಎನ್ನಲಾಗಿದೆ. ಇದೀಗ ಕೋವಿಡ್ ಪರೀಕ್ಷೆ ಮಾಡಿಸಿ ಕೊಂಡಿದ್ದು, ವರದಿಯಲ್ಲಿ ಪಾಸಿಟಿವ್ ವರದಿ ಬಂದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಎಂಎಸ್ಐಎಲ್ ಅಧ್ಯಕ್ಷರಾಗಿ ನೇಮಕಗೊಂಡ ಸಮಯದಲ್ಲಿ ಅವರ ಅಭಿಮಾನಿಗಳು, ಬೆಂಬಲಿಗರು, ಪಕ್ಷದ ಪದಾಧಿಕಾರಿಗಳು ಸಾಕಷ್ಟು ಜನ ಅವರಿಗೆ ಶುಭ ಕೋರಿದ್ದರು. ಅಲ್ಲದೇ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭೇಟಿ ಮಾಡಿದ್ದರು ಎನ್ನಲಾಗಿದೆ.

Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp