ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಹಿಂದೂಗಳ ದಶಕಗಳ ಕನಸು ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಆಗಸ್ಟ್ 5 ಅಂದರೆ ನಾಳೆ ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಇದೇ ಕಾರಣಕ್ಕೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮಂಗಳೂರು ಪೊಲೀಸರು ನಾಳೆ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಅದರಂತೆ ನಗರದಲ್ಲಿ ಇಂದು ರಾತ್ರಿ ರಿಂದ ಗುರುವಾರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗೂಡುವಿಕೆ, ಸಾರ್ವಜನಿಕ ಸಭೆ ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ.

ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com