ಕೊರೋನಾ ಚಿಕಿತ್ಸೆಯ ನಡುವೆಯೂ ಸಿಎಂ ಕರ್ತವ್ಯ ನಿಷ್ಠೆ: ಆಸ್ಪತ್ರೆಯಿಂದಲೇ ವೆಂಟಿಲೇಟರ್ ಗಳ ಬಗ್ಗೆ ಮಾಹಿತಿ 

ಕೊರೋನಾ ಸೋಂಕಿನ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅನಾರೋಗ್ಯದ ನಡುವೆಯು ತಮ್ಮ ಕೆಲಸವನ್ನು ಆಸ್ಪತ್ರೆಯಿಂದಲೇ ನಿರ್ವಹಿಸಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸೋಂಕಿನ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅನಾರೋಗ್ಯದ ನಡುವೆಯು ತಮ್ಮ ಕೆಲಸವನ್ನು ಆಸ್ಪತ್ರೆಯಿಂದಲೇ ನಿರ್ವಹಿಸಿದ್ದಾರೆ. 

ಕೋವಿಡ್ ದೃಢಪಟ್ಟ ಕಾರಣಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ, ರಾಜ್ಯದಲ್ಲಿ ವೆಂಟಿಲೇಟರ್ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವ ಕುರಿತಂತೆ ದೂರವಾಣಿ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಪಿ.ಎಂ. ಕೇರ್ಸ್ ನಿಧಿಯಲ್ಲಿ ರಾಜ್ಯಕ್ಕೆ ಈಗಾಗಲೇ 681 ವೆಂಟಿಲೇಟರ್‌ಗಳು ದೊರೆತಿವೆ..

ಕಳೆದ ವಾರದಲ್ಲಿ ಬೆಂಗಳೂರಿನಲ್ಲಿ 166 ಸೇರಿದಂತೆ ರಾಜ್ಯದಲ್ಲಿ ವೆಂಟಿಲೇಟರ್ ಹಾಸಿಗೆಗಳ ಸಂಖ್ಯೆಯನ್ನು ಒಟ್ಟು 335ಕ್ಕೆ ಹೆಚ್ಚಿಸಲಾಗಿದೆ. ವಾರಾಂತ್ಯದಲ್ಲಿ ಉಳಿದ 346 ವೆಂಟಿಲೇಟರ್‌ಳನ್ನು ಅಳವಡಿಸಲಾಗುವುದು. ಆಸ್ಪತ್ರೆಯ ಸಿಬ್ಬಂದಿ ಈ ವೆಂಟಿಲೇಟರ್‌ಗಳನ್ನು ಬಳಸಬೇಕು ಎಂದು ಸೂಚಿಸಿದರು.

ಅನೆಸ್ಥಿಟಿಕ್‌, ಪಾರಾ ಮೆಡಿಕಲ್ ಸಿಬ್ಬಂದಿಯನ್ನು ತಕ್ಷಣವೇ ನೇಮಕ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ವೆಂಟಿಲೇಟರ್‌ಗಳನ್ನು ಒದಗಿಸುವಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಾಡಿರುವ ಮನವಿಯನ್ನು ಪರಿಗಣಿಸಬೇಕು. ಕೋವಿಡ್ 19 ಸಂಬಂಧ ತಾತ್ಕಾಲಿಕವಾಗಿ ಒದಗಿಸಲು ಷರತ್ತು ಮತ್ತು ನಿಯಮಗಳ ಬಗ್ಗೆ ತೀರ್ಮಾನಿಸಬೇಕು ಎಂದೂ ಅಧಿಕಾರಿಗಳಿಗೆ ಸಲಹೆ ನೀಡಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com