ಕೋವಿಡ್ ತಜ್ಞರ ಸಮಿತಿಯ ಕಾರ್ಯವ್ಯಾಪ್ತಿ ತಿಳಿಸಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಕೋವಿಡ್-19 ನಿರ್ವಹಣೆ ವಿಚಾರದಲ್ಲಿ ಮೇಲ್ವಿಚಾರಣೆ ವಹಿಸಲು ಮತ್ತು ಅಗತ್ಯ ಮಾರ್ಗದರ್ಶನ ನೀಡಲು ರಚಿಸಲಾಗಿರುವ ರಾಜ್ಯ ಮಟ್ಟದ ತಜ್ಞರ ಸಮಿತಿಯ ಕಾರ್ಯವ್ಯಾಪ್ತಿ ಮತ್ತು ಕಾರ್ಯವೈಖರಿಯ ಬಗ್ಗೆ ಸ್ಪಷ್ಟ ಮಾರ್ಗಸೂಚಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
Published: 05th August 2020 08:06 AM | Last Updated: 05th August 2020 08:06 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕೋವಿಡ್-19 ನಿರ್ವಹಣೆ ವಿಚಾರದಲ್ಲಿ ಮೇಲ್ವಿಚಾರಣೆ ವಹಿಸಲು ಮತ್ತು ಅಗತ್ಯ ಮಾರ್ಗದರ್ಶನ ನೀಡಲು ರಚಿಸಲಾಗಿರುವ ರಾಜ್ಯ ಮಟ್ಟದ ತಜ್ಞರ ಸಮಿತಿಯ ಕಾರ್ಯವ್ಯಾಪ್ತಿ ಮತ್ತು ಕಾರ್ಯವೈಖರಿಯ ಬಗ್ಗೆ ಸ್ಪಷ್ಟ ಮಾರ್ಗಸೂಚಿ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕೋವಿಡ್-19 ನಿರ್ವಹಣೆ ವಿಚಾರವಾಗಿ ಸಲ್ಲಿಸಲಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ರಾಜ್ಯ ಮಟ್ಟದ ತಜ್ಞರ ಸಮಿತಿ ಕೇವಲ ಆಸ್ಪತ್ರೆಗಳಿಗೆ ಭೇಟಿ, ಪರಿಶೀಲನೆ ಅಥವಾ ಸಭೆ ನಡೆಸುವುದಕ್ಕಷ್ಟೇ ಸೀಮಿತವಾಗದೇ, ಹಾಸಿಗೆಗಳ ಲಭ್ಯತೆ, ಆ್ಯಂಬುಲೆನ್ಸ್ ವ್ಯವಸ್ಥೆ, ಕೋವಿಡ್ ಆಸ್ಪತ್ರೆ ಹಾಗೂ ಆರೈಕೆ ಕೇಂದ್ರಗಳಲ್ಲಿ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಶುಚಿತ್ವ ಹಾಗೂ ಮೂಲಸೌಕರ್ಯಗಳ ಬಗ್ಗೆ ಮೇಲ್ವಿಚಾರಣೆ ನಡೆಸಬೇಕಾಗುತ್ತದೆ ಎಂದು ನ್ಯಾಯಪೀಠ ಹೇಳಿತು.