ಶಾಸಕರಾದ ಜಿಟಿ ದೇವೇಗೌಡ, ಹರೀಶ್ ಪೂಂಜಾಗೂ ವಕ್ಕರಿಸಿದ ಕೊರೋನಾ, ಮನೆಯಲ್ಲೇ ಚಿಕಿತ್ಸೆ!

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Published: 05th August 2020 10:49 PM  |   Last Updated: 06th August 2020 03:26 PM   |  A+A-


GT Devegowda

ಜಿ.ಟಿ ದೇವೇಗೌಡ

Posted By : Vishwanath S
Source : Online Desk

ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಕೊರೋನಾ ಸೋಂಕು ಧೃಡಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ನಾನು ಕೂಡ ಕೋವಿಡ್‌-19 ಪರೀಕ್ಷೆ ಮಾಡಿಸಿಕೊಂಡಿದ್ದು, ಅದರಲ್ಲಿ ಪಾಸಿಟಿವ್‌ ವರದಿ ಬಂದಿದೆ. ತಮಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ ಕಂಡು ಬಂದಿಲ್ಲ ಆದರೂ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.

ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮತ್ತು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ. ಜಿ.ಟಿ.ದೇವೇಗೌಡರು ಯಾವುದೇ ಕಾರ್ಯಕ್ರಮ ಪ್ರಮುಖ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿರಲಿಲ್ಲ. ಆದರೆ ಕ್ಷೇತ್ರದಲ್ಲಿ ಕೊರೋನಾ ಸಂಬಂಧಿಸದಂತೆ ಸುತ್ತಾಟ, ಜಿಲ್ಲಾಧಿಕಾರಿಗಳು ನೇತೃತ್ವದ ಸಭೆಗಳಲ್ಲಿ ಅವರು ಭಾಗವಹಿಸಿದ್ದರು.

ಶಾಸಕ ಹರೀಶ್ ಪೂಂಜಾಗೂ ಕೊರೋನಾ! ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಸೋಂಕು ತಗಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಬೆಂಗಳೂರಿನಲ್ಲಿ ಹರೀಶ್ ಪೂಂಜಾ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಇದೀಗ ಸೋಂಕು ಪತ್ತೆಯಾದ ನಂತರ ಶಾಸಕರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
SChool_Children1

ಕೆಲವು ರಾಜ್ಯಗಳಲ್ಲಿ ಶಾಲೆಗಳ ಭಾಗಶಃ ಪುನರಾರಂಭವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp