ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿ ಕಾಲಿಗೆ ಗುಂಡೇಟು, ಬಂಧನ

ಬೆಳ್ಳಂಬೆಳಗ್ಗೆ ರೌಡಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ.

ಅನೀಸ್ ಅಹ್ಮದ್ ಎಂಬಾತ ಪೊಲೀಸರ ಗುಂಡಿನ ದಾಳಿಗೊಳಗಾಗಿ ಬಂಧಿತನಾದ ಆರೋಪಿ. ಕಳೆದ ಮೂರು ವರ್ಷಗಳಿಂದ ಪೊಲೀಸರ ಕೈಗೆ ಸಿಗದ ತಲೆಮರೆಸಿಕೊಂಡಿದ್ದು. ಅನೀಸ್ 1 ಕೊಲೆ ಸೇರಿ ಹಲವು ದರೋಡೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ.

ಖಚಿತ ಮಾಹಿತಿ ಮೇರೆಗೆ ಅನೀಸ್ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ ಹಲ್ಲೆ ನಡೆಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ಅಜಯ್ ಸಾರತಿ ಅವರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ.

ಆದರೂ ಆರೋಪಿ ಮತ್ತೆ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಆತ್ಮ ರಕ್ಷಣೆಗಾಗಿ ಇನ್ಸ್‌ಪೆಕ್ಟರ್‌ ಆರೋಪಿ ಅನೀಸ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಅಲ್ಲೇ ಕುಸಿದು ಬಿದ್ದ ಆರೋಪಿಯನ್ನು ಸುತ್ತುವರಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ಅವರನ್ನು ಕೂಡ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com