ಲೈಂಗಿಕ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ದೂರು

ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ವಿರುದ್ಧ ಸಂತ್ರಸ್ತ ಯುವತಿ ವೈಟ್ ಫೀಲ್ಡ್ ಪೊಲೀಸರಿಗೆ ದೂರು ನೀಡಿದ್ದಾರೆ.
ಲೈಂಗಿಕ ಕಿರುಕುಳ
ಲೈಂಗಿಕ ಕಿರುಕುಳ

ಬೆಂಗಳೂರು: ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡು ದೈಹಿಕ ಸಂಪರ್ಕ ಬೆಳೆಸಲು ಪೀಡಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ವಿರುದ್ಧ ಸಂತ್ರಸ್ತ ಯುವತಿ ವೈಟ್ ಫೀಲ್ಡ್ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾರತ್‌ಹಳ್ಳಿಯ 20 ವರ್ಷದ ಯುವತಿ ಮೈಸೂರು ಮೂಲದ ವೈದ್ಯಕೀಯ ವಿದ್ಯಾರ್ಥಿ ರಾಬರ್ಟ್ ರೋಷನ್ ಎಂಬುವವನ ವಿರುದ್ಧ ವೈಟ್ ಫೀಲ್ಡ್ ಸೈಬರ್ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ. ಇನ್ಸ್ ಸ್ಟಾಗ್ರಾಮ್ ನಲ್ಲಿ ಕೆಲವು ತಿಂಗಳ ಹಿಂದೆ ಪರಿಚಿತನಾಗಿದ್ದ ಆರೋಪಿ ತಾನು ವೈದ್ಯಕೀಯ ವಿದ್ಯಾರ್ಥಿ ಎಂದು ಹೇಳಿಕೊಂಡು ಯುವತಿಯೊಂದಿಗೆ ಚಾಟ್ ಮಾಡುತ್ತಿದ್ದು, ನಂತರದಲ್ಲಿ ಇಬ್ಬರು ಸ್ನೇಹಿತರಾಗಿದ್ದಾರೆ. 

ಮಾರ್ಚ್ ನಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿ ಯುವತಿಯೊಂದಿಗೆ ಸುತ್ತಾಡಿದ್ದಾನೆ. ಆಕೆಯೊಂದಿಗಿದ್ದ ಕ್ಷಣಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಬಳಿಕ ಫೋಟೋಗಳನ್ನು ಕಳುಹಿಸಿ ಅಶ್ಲೀಲವಾಗಿ ಚಾಟಿಂಗ್ ಮಾಡುತ್ತಿದ್ದ ಆತ ದೈಹಿಕ ಸಂಪರ್ಕ ಬೆಳೆಸುವಂತೆ ಬಲವಂತ ಮಾಡಿದ್ದಾನೆ. ಅಲ್ಲದೆ ಸಹೋದರಿಯ ಖಾಸಗಿ ಫೋಟೋ ಕಳುಹಿಸಿಕೊಡುವಂತೆ ಯುವತಿಗೆ ಪೀಡಿಸಿದ್ದಾನೆ. ಆತನ ಕಿರುಕುಳ ಹೆಚ್ಚಾಗಿದ್ದರಿಂದ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com