ಕರ್ನಾಟಕದಲ್ಲಿಂದು ಕೊರೋನಾಗೆ 93 ಬಲಿ, ದಾಖಲೆಯ 6,805 ಪ್ರಕರಣ ಪತ್ತೆ 1.58 ಲಕ್ಷ ಸೋಂಕು!

ಕರ್ನಾಟಕದಲ್ಲಿ ಇಂದು ಕೊರೋನಾಗೆ 93 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,805 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾಗೆ 93 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,805 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 93 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 2,897ಕ್ಕೆ ಏರಿಕೆಯಾಗಿದೆ. 

ಒಟ್ಟಾರೆ 1,58,254 ಕೊರೋನಾ ಪ್ರಕರಣಗಳ ಪೈಕಿ 80,281 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 75,068 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇನ್ನು ರಾಜ್ಯಾದ್ಯಂತ ಸುಮಾರು 671 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com