ರಾಜ್ಯಾದ್ಯಂತ ಮಳೆ ಹಿನ್ನೆಲೆ: ಜ್ವರ, ನೆಗಡಿಯಂತಹ ರೋಗ ಲಕ್ಷಣ ಕಾಣಿಸಿಕೊಂಡರೆ 104ಕ್ಕೆ ಕರೆ ಮಾಡಿ- ಡಾ. ಕೆ.ಸುಧಾಕರ್

ರಾಜ್ಯದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜ್ವರ, ನೆಗಡಿಯಂತಹ ರೋಗ ಲಕ್ಷಣಗಳು ಕಂಡಬಂದಿದ್ದೆ ಆದರೆ, 104ಗೆ ಕರೆ ಮಾಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ. 
ಸಚಿವ ಡಾ.ಸುಧಾಕರ್
ಸಚಿವ ಡಾ.ಸುಧಾಕರ್

ಬೆಂಗಳೂರು: ರಾಜ್ಯದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜ್ವರ, ನೆಗಡಿಯಂತಹ ರೋಗ ಲಕ್ಷಣಗಳು ಕಂಡಬಂದಿದ್ದೆ ಆದರೆ, 104ಗೆ ಕರೆ ಮಾಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇವರ ಕೃಪೆಯಿಂದ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಕೊರೊನಾ ಸೋಂಕಿನ ಮಧ್ಯೆ ಮಳೆಯಾಗುತ್ತಿದ್ದು, ಜನರು ಅತ್ಯಂತ ಜಾಗೃತೆವಹಿಸಿ. ಜ್ವರ, ಕೆಮ್ಮು, ನೆಗಡಿ, ಶೀತ ಮತ್ತಿತರೇ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕರೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಅವರು, ಬೆಂಗಳೂರಿನ 11 ಕೋವಿಡ್ ಕೇರ್ ಸೆಂಟರ್‌ನಲ್ಲಿ 4,276 ಹಾಸಿಗೆಗಳಿವೆ. ಇಂದು ಬೆಳಗ್ಗೆ ಈ ಪೈಕಿ 936 ಬೆಡ್‌ಗಳು ಅಂದರೆ ಶೇಕಡಾ 27.79ರಷ್ಟು ಖಾಲಿ ಇವೆ. 3346 ಸೋಂಕಿತರ ಪೈಕಿ 306 ಮಂದಿ ಇಂದು ಗುಣಮುಖರಾಗಿ ಈ ಕೇಂದ್ರಗಳಿಂದ ಬಿಡುಗಡೆ ಹೊಂದಿದ್ದಾರೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com