ಪ್ರವಾಹ ಪೀಡಿತ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಅನುದಾನ: ಅಶೋಕ್

ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ಆರ್.ಅಶೋಕ್
ಆರ್.ಅಶೋಕ್

ಉಡುಪಿ: ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ಪ್ರವಾಹ ಪರಿಶೀಲನೆ ಸಭೆ ನಂತರ ಮಾತನಾಡಿದ ಅವರು  ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಿದ್ಧವಿದ್ದು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ,ಹಾಸನ, ಹಾವೇರಿ, ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2, 3 ಹಾಗೂ 4ನೇ ಕಂತಿನ ಹಣವನ್ನು ವಾರದೊಳಗೆ ಬಿಡುಗಡೆ ಮಾಡಲಾಗುವುದು. ಗೃಹ ನಿರ್ಮಾಣ ಮಂಡಳಿಗೆ ರು. 300 ಕೋಟಿ ಬಿಡುಗಡೆ ಮಾಡುತ್ತಿದ್ದು, ಹಣ ಬಿಡುಗಡೆ ಸಂಬಂಧ ಎಲ್ಲ ಫಲಾನುಭವಿಗಳಿಗೂ  ಬರೆದು ಮಾಹಿತಿ ನೀಡಲಿದೆ ಎಂದು ತಿಳಿಸಿದರು.

ಕೊಡಗಿನಲ್ಲಿ ಭೂ ಕುಸಿತದಿಂದ ನಾಪತ್ತೆಯಾಗಿರುವ ಅರ್ಚಕರ ಕುಟುಂಬವನ್ನು ಮೊದಲೇ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸುವಂತಚೆ ಸೂಚಿಸಿದ್ದೆವು, ಆದರೆ ಅರ್ಚಕರುಅದಕ್ಕೆ ಒಪ್ಪಿರಲಿಲ್ಲ ಎಂದು ಎಂದು ಅಶೋಕ್ ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳು ಮತ್ತು ನದಿ ತೀರಗಳಲ್ಲಿ ವಾಸಿಸುತ್ತಿರುವ ಜನರನ್ನು, ಹತ್ತಿರದ ಶಾಲೆ ಮತ್ತು ಕಾಲೇಜು ಕಟ್ಟಡಗಳಲ್ಲಿ ಸ್ಥಾಪಿಸಲಾದ ಪರಿಹಾರಿ ಶಿಬಿರಗಳಲ್ಲಿ ಆಶ್ರಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ಪ್ರವಾಹದ ಕೋಪವನ್ನು ನಿಭಾಯಿಸಲು ಉಪಕರಣಗಳನ್ನು ಸಂಗ್ರಹಿಸಲು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ 20 ಕೋಟಿ ರೂ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com