ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಹೆಚ್ಚುವರಿ ಪರಿಹಾರ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರಧನ ಹೆಚ್ಚಿಸಿದೆ. 

Published: 08th August 2020 04:31 PM  |   Last Updated: 08th August 2020 04:31 PM   |  A+A-


Karnataka Floods

ಪ್ರವಾಹ

Posted By : Srinivasamurthy VN
Source : UNI

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರಧನ ಹೆಚ್ಚಿಸಿದೆ. 

ಮಳೆಯಿಂದಾಗಿ ಮನೆಯಲ್ಲಿನ ಬಟ್ಟೆ, ದಿನಬಳಕೆ, ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿದ್ದಲ್ಲಿ ಕೇಂದ್ರದ ಮಾರ್ಗಸೂಚಿಯ ಜತೆಗೆ ರಾಜ್ಯ ಸರ್ಕಾರವೂ ಸಹ ಹೆಚ್ಚಿನ ಪರಿಹಾರ ನೀಡಲಿದೆ ಎಂದು ತಿಳಿಸಿದೆ. ಶೇ. 75 ಕ್ಕಿಂತ ಹೆಚ್ಚು ಹಾನಿಗೀಡಾದ ಮನೆಗಳಿಗೆ ಪರಿಷ್ಕೃತ ಮಾರ್ಗಸೂಚಿಯಂತೆ 5 ಲಕ್ಷ ರೂಪಾಯಿ, ಶೇ. 25 ರಿಂದ 75 ರಷ್ಟು ಹಾನಿಗೀಡಾಗಿ, ವಾಸಿಸಲು ಯೋಗ್ಯವಿಲ್ಲದೆ ಪುನರ್ ನಿರ್ಮಾಣ ಮಾಡಲೇಬೇಕಾದ ಮನೆಗಳಿಗೂ ಸಹ 5 ಲಕ್ಷ ರೂಪಾಯಿ, ಶೇ. 25 ರಿಂದ 75 ರಷ್ಟು ಹಾನಿಗೀಡಾಗಿ ದುರಸ್ತಿ ಮಾಡಲು ಸಾಧ್ಯವಿರುವಂತಹ ಮನೆಗಳಿಗೆ 3 ಲಕ್ಷ ರೂಪಾಯಿ, ಶೇ.15 ರಿಂದ 25 ರಷ್ಟು ಅಲ್ಪ-ಸ್ವಲ್ಪ ಹಾನಿಗೀಡಾದ ಮನೆಗಳಿಗೆ 50 ಸಾವಿರ ರೂಪಾಯಿ ನೆರವು ನೀಡುವುದಾಗಿ ಪ್ರಕಟಿಸಿದೆ.

ಇದಲ್ಲದೆ, ದಿನಬಳಕೆ ವಸ್ತುಗಳನ್ನು ಕಳೆದುಕೊಂಡವರಿಗೆ ತಕ್ಷಣಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯಿಂದ 10 ಸಾವಿರ ರೂಪಾಯಿ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ. ಮನೆ ಕಳೆದುಕೊಂಡ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಅಭಿವೃದ್ಧಿಪಡಿಸಲಾದ ತಂತ್ರಾಂಶದ ಮೂಲಕ ಹೊಸ ಮನೆ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Stay up to date on all the latest ರಾಜ್ಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp