ಖಾಸಗಿ ಶಾಲಾ ಶಿಕ್ಷಕರು, ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಒತ್ತಾಯ

ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com