ಪರೀಕ್ಷಾ ಶುಲ್ಕ, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆ

ಪರೀಕ್ಷಾ ಶುಲ್ಕ ಬೆಂಗಳೂರು ನಗರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆಯಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ
ಬೆಂಗಳೂರು ವಿಶ್ವವಿದ್ಯಾಲಯ

ಬೆಂಗಳೂರು: ಪರೀಕ್ಷಾ ಶುಲ್ಕ ಬೆಂಗಳೂರು ನಗರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮತ್ತೊಂದು ಹೊರೆಯಾಗಿದೆ.

ತಮ್ಮ ತಂದೆ ಕಟ್ಟಡ ಕಾರ್ಮಿಕರಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಉದ್ಯೋಗ ಇಲ್ಲದೆ, ಈಗ ಬೇರೊಂದು ಕೆಲಸ ಮಾಡುತ್ತಿದ್ದಾರೆ. ಪರೀಕ್ಷಾ ಶುಲ್ಕ ಪಾವತಿಸಲು ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿ ಸುಮುಖಿ(ಹೆಸರು ಬದಲಾಯಿಸಲಾಗಿದೆ) ಅಳಲು ತೋಡಿಕೊಂಡಿದ್ದಾರೆ.

ಪೋಷಕರು ಕೃಷಿ ಅಥವಾ ಕಟ್ಟಡ ಕೆಲಸ ಮಾಡುತ್ತಿದ್ದು, ಕಾಲೇಜ್ ಶುಲ್ಕ ಪಾವತಿಗೆ ತುಂಬಾ ಕಷ್ಟವಾಗಿತ್ತು. ಇದೀಗ ಮತ್ತೆ ಪರೀಕ್ಷಾ ಶುಲ್ಕ ಹೇಗೆ ಕಟ್ಟಲಿ ಎಂಬುದು ತೋಚುತ್ತಿಲ್ಲ ಎಂದು ಆಕೆ ಹೇಳಿಕೊಂಡಿದ್ದಾಳೆ.

ಇತ್ತೀಚಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಪಾವತಿ ಹಾಗೂ ಅರ್ಜಿ ಭರ್ತಿ ಮಾಡಲು ಆಗಸ್ಟ್ 15 ಕೊನೆಯ ದಿನವೆಂದು ಗಡುವು ನೀಡಿದೆ. ಜುಲೈ 24 ರಂದು ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ. ಆದರೆ, ನಮ್ಮ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಸಹಜ ಪರಿಸ್ಥಿತಿವೇರ್ಪಟ್ಟಿದೆ ಎಂಬಂತ ರೀತಿಯಲ್ಲಿ ವಿಶ್ವವಿದ್ಯಾಲಯ ಚಟುವಟಿಕೆಗಳನ್ನು ಆರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರ ಈ ಬಾರಿ ದಾಖಲಾತಿ ಹಾಗೂ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಬೇಕು ಎದು ಅಖಿಲ ಭಾರತೀಯ ಪ್ರಜಾಸತಾತ್ಮಕ ವಿದ್ಯಾರ್ಥಿ ಸಂಘಟನೆ ಬೆಂಗಳೂರು ನಗರ ಅಧ್ಯಕ್ಷೆ ಹೆಚ್. ಎಂ. ಸಿತಾರಾ ಒತ್ತಾಯಿಸಿದ್ದಾರೆ. 

ಸ್ನಾತಕೋತ್ತರ ಪದವಿಯ ನಾಲ್ಕನೇ ಸೆಮಿಸ್ಟರ್  ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 15 ಮತ್ತು 21ರ ನಡುವೆ ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನವನ್ನು ವಿಶ್ವವಿದ್ಯಾಲಯ ನಡೆಸಲಿದ್ದು, ಸೆಪ್ಟೆಂಬರ್ 1-14ರ ನಡುವೆ ನಾಲ್ಕನೇ ಸೆಮಿಸ್ಟರ್ ಪರೀಕ್ಷೆ ನಡೆಯಲಿದೆ ಎಂದು ವೆಬ್ ಸೈಟ್ ನಲ್ಲಿ ಈಗಾಗಲೇ ಘೋಷಿಸಲಾಗಿದೆ. ಬಾಕಿ ಉಳಿದಿದ್ದ ದ್ವಿತೀಯ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾಯೋಗಿಕ ಪರೀಕ್ಷೆ
ನಂತರ ಸೆಪ್ಟೆಂಬರ್ 22ರಿಂದ 30 ರವರೆಗೂ ನಡೆಸುವುದಾಗಿ ತಿಳಿಸಲಾಗಿದೆ.

ಆದಾಗ್ಯೂ,  ಸರ್ಕಾರದ ನಿರ್ದೇಶನದಂತೆ ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿಲ್ಲ ಎಂದು ವಿಶ್ವವಿದ್ಯಾಲಯ ತಿಳಿಸಿದೆ. ಬದಲಿಗೆ ಹಿಂದಿನ ಸೆಮಿಸ್ಟರ್ ನ ಪರೀಕ್ಷೆ ಹಾಗೂ ಆಂತರಿಕ ಪರೀಕ್ಷೆ ಕಾರ್ಯಕ್ಷಮತೆ ಆಧಾರದ ಮೇಲೆ ವಿದ್ಯಾರ್ಥಿಗಲನ್ನು ಮೌಲ್ಯಮಾಪನಗೊಳಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com