ಬೈಕ್‌ ವೀಲಿಂಗ್ ಮಾಡುತ್ತಿದ್ದವರ ಬಂಧನ

ನಗರದ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಚಂದನ್ (21), ಸುಮಂತ್ (20), ಲಿಖಿತ್ (21), ವಿನಯ್ (28) ಬಂಧಿತ ಆರೋಪಿಗಳು. ವೀಲಿಂಗ್ ಮಾಡಲು ಬಳಸಿದ್ದ 3 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರು ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಈ ಹಿಂದೆಯೂ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಮೊಬೈಲ್‌ನಲ್ಲಿ ಈ ಹಿಂದಿನ ವೀಲಿಂಗ್ ವಿಡಿಯೋಗಳು ಪತ್ತೆಯಾಗಿವೆ‌. ಸದ್ಯ ಬ್ಯಾಟರಾಯನಪುರ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com