ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ

ಕೋವಿಡ್‌ ಪಾಸಿಟಿವ್‌ಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಶುಭಹಾರೈಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್‌ ಪಾಸಿಟಿವ್‌ಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್‌ ಗಾಂಧಿ ಶುಭಹಾರೈಸಿದ್ದಾರೆ.

ಭಾನುವಾರ ಸಿದ್ದರಾಮಯ್ಯ ಅವರಿಗೆ ಫೋನ್‌ ಮಾಡಿದ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದರು. ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೋವಿಡ್ ಪಾಸಿಟಿವ್ ಆಗಿದ್ದು ಅವರು ಕೂಡಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೂ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com