ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ: ಎಚ್ ಡಿ ಕುಮಾರಸ್ವಾಮಿ
ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.
Published: 10th August 2020 12:58 PM | Last Updated: 10th August 2020 12:58 PM | A+A A-

ಎಚ್ ಡಿ ಕುಮಾರಸ್ವಾಮಿ ಮತ್ತು ಕನ್ನಿಮೋಳಿ
ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ ಅವರು, 'ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಹೇಳಿದ್ದಾರೆ.
ಅಂತೆಯೇ 'ಭಾಷೆ ಕಾರಣಕ್ಕೆ ಸಂಸದೆ ಕನ್ನಿಮೋಳಿ ಅವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ ಎಂದು ಟ್ವೀಟ್ ಮಾಡಿದ್ದಾರೆ.
ಭಾಷೆ ಪಂಥ ನಡಿದ್ಹಾಂಗಾಗಲಿ
— H D Kumaraswamy (@hd_kumaraswamy) August 10, 2020
ಹಾಸ್ಯ ಮಾಡಿ ಜನರೆಲ್ಲರು ನಗಲಿ
ಈ ಶಿಶುನಾಳಧೀಶ ಸದ್ಗುರುವಿನ
ಲೇಸಾದ ದಯವೊಂದು ಕಡೆತನಕಿರಲಿ
- ಶಿಶುನಾಳ ಶರೀಫರು
7/7
ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ.
— H D Kumaraswamy (@hd_kumaraswamy) August 10, 2020
6/7
ಭಾಷೆ ಕಾರಣಕ್ಕೆ @arivalayam ಸಂಸದೆ @KanimozhiDMK ಅವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ.
— H D Kumaraswamy (@hd_kumaraswamy) August 10, 2020
1/7