ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣ, ಚಿಕ್ಕಬಳ್ಳಾಪುರಕ್ಕೆ ಪ್ರಥಮ ಸ್ಥಾನ

ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ.

Published: 10th August 2020 03:33 PM  |   Last Updated: 10th August 2020 03:46 PM   |  A+A-


Government schools perform better in Karnataka SSLC results 2018

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜ್ಯಾದ್ಯಂತ 8, 48, 203 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 19, 086 ವಿದ್ಯಾರ್ಥಿಗಳ ಕೊರತೆಯುಂಟಾಗಿತ್ತು. ರಾಜ್ಯಾದ್ಯಂತ 34 ಶೈಕ್ಷಣಿಕ ಜಿಲ್ಲೆಗಳ 22 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿತ್ತು ಎಂದು ಹೇಳಿದರು. ಕೊರೊನಾ ಸೋಂಕಿನ ಭೀತಿಯಿಂದ 18,067 ವಿದ್ಯಾರ್ಥಿಗಳು ಮೊದಲು ಪರೀಕ್ಷೆ ಬರೆಯದೆ, ಪೂರಕ ಪರೀಕ್ಷೆಗೆ ಹಾಜರಾಗಿದ್ದರು. 227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಿತು. 52,219 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವರ್ಷ ಶೇ.71.80 ಮಂದಿ ಅಂದರೆ 5, 82, 314 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷ 73.70 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ದ್ವಿತೀಯ ಮಧುಗಿರಿ ತೃತೀಯ, ಮಂಡ್ಯ ಜಿಲ್ಲೆಗೆ ನಾಲ್ಕನೇ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನ ಲಭಿಸಿದೆ. 2, 28, 734 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.

ಈ ಪೈಕಿ ಸರ್ಕಾರಿ ಶಾಲೆಗಳ ಶೇ.72.79 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅನುದಾನಿತ ಶಾಲೆಗಳ ಶೇ. 70.60 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನುದಾನ ರಹಿತ ಶಾಲೆಗಳ ಶೇ.83.12ಮಂದಿ ವಿದ್ಯಾರ್ಥಿಗಲು ಉತ್ತೀರ್ಣರಾಗಿದ್ದಾರೆ.

ಪ್ರತೀ ಬಾರಿಯಂತೆಯೂ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ಈ  ಬಾರಿ ಶೇ.66.41 ಬಾಲಕರು ಉತ್ತೀರ್ಣರಾಗಿದ್ದು, ಶೇ.77.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ.  6 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದು,  ಕಳೆದ ಬಾರಿ ಇಬ್ಬರು ಮಾತ್ರ ಈ ಸಾಧನೆ ಗೈದಿದ್ದರು.

ಅಂತೆಯೇ ಈ ಬಾರಿ 11 ಮಂದಿ 625ಕ್ಕೆ 624 ಅಂಕಗಳನ್ನು ಪಡೆದಿದ್ದು, ಕಳೆದ ಬಾರಿ 11 ಇಷ್ಚು ಅಂಕಗಳಿಸಿದ್ದರು. 

ಇನ್ನು ನಗರ ಪ್ರದೇಶದಲ್ಲಿ ಶೇ.73.41 ರಷ್ಟು ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ಶೇ.77.18 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂತೆಯೇ ಕನ್ನಡ ಮಾಧ್ಯಮದ ಶೇ. 70.49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು. ಆಂಗ್ಲ ಮಾಧ್ಯಮದ ಶೇ.84.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಎಸ್ಎಂಎಸ್‌ ಮೂಲಕ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ, ಮಂಗಳವಾರ ಬೆಳಿಗ್ಗೆ ಆಯಾ ಶಾಲೆಗಳಲ್ಲಿ ಫಲಿತಾಂಶ ನೋಡಬಹುದು. 
http://kseeb.kar.nic.in ಮತ್ತು http:/karresults.kar.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
 

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp