ಭಾರೀ ಮಳೆ, ಹಲವೆಡೆ ಪ್ರವಾಹ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Published: 10th August 2020 07:27 AM  |   Last Updated: 10th August 2020 07:27 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇದು ಆ.13ರವರೆಗೂ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ. 

ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಕಡಿಮೆ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಮಂಗಳೂರು ಮತ್ತು ಕಾರವಾರದ ಸಮುದ್ರದಲ್ಲಿ ಸುಮಾರು 4 ಮೀಟರ್ ನಷ್ಟು ಎತ್ತರದ ಅಲೆಗಳು ಕಂಡು ಬರಲಿವೆ. ಗಾಳಿಯ ವೇಗ ಗಂಟೆಗೆ 50-60 ಕಿಮೀ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ದುರ್ಬಲವಾಗುವುದರಿಂದ ಆ.10 ಮತ್ತು 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಕೊಡಗಿನಲ್ಲಿ ಸುರಿಯುತ್ತಿರುವ ನಿಂತರ ಮಳೆಯಿಂದ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ಥಳಕ್ಕೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. 

ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖ ಹಾಟ್ ಸ್ಪಾಟ್ ಗಳಲ್ಲಿ ಮುಂಜಾಗ್ರತೆಯಾಗಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ. ನದಿ ಪಾತ್ರಗಳಲ್ಲಿ ಪೊಲೀಸರು ಗಸ್ತು ತಿರುಗುವ ಮೂಲಕ ನದಿಗೆ ಇಳಿಯುವವರ ಮೇಲೆ ಹದ್ದಿನ ಕಣ್ಣಿಡುವಂತೆ ಸೂಚಿಸಲಾಗಿದೆ. 

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp