ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್: ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಲ್ಲು ತೂರಾಟ

 ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸ್  ಅವರ ಮನೆ, ಕಚೇರಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಕಾಲವ್ ಬೈರಸಂದ್ರದಲ್ಲಿ ನಡೆದಿದೆ,
ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್: ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಲ್ಲು ತೂರಾಟ

ಬೆಂಗಳೂರು: ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ, ಕಚೇರಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಕಾಲವ್ ಬೈರಸಂದ್ರದಲ್ಲಿ ನಡೆದಿದೆ,

ಹದಿನೈದಕ್ಕೆ ಹೆಚ್ಚು ಕಿಡಿಗೇಡಿಗಳಿಂದ ಶಾಸಕರ ಮನೆ ಮೇಲೆ ದಾಳಿ ನಡೆಸಲಾಗಿದೆ,

ಅಲ್ಲದೆ ಶಾಸಕರ ಸೋದರಳಿಯ ನವೀನ್ ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ನೂರಾರು ಜನರು ನಗರದ ಕೆಜಿ ಹಳ್ಳಿ ಪೋಲೀಸ್ ಠಾಣೆ ಎದುರು ಜಮಾಯಿಸಿದ್ದು ನವೀನ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಪುಲಕೇಶಿನಗರದ ಕಾಂಗ್ರೆಸ್ ಶಾಸಕರಾದ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ, ಸಧ್ಯ ಜನರನ್ನು ಸಮಾಧಾನಪಡಿಸಲು ಶಾಸಕ ಜಮೀರ್ ಅಹಮದ್ ಖಾನ್ ಸಹ  ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. 

ಕಾಂಗ್ರೆಸ್ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ ಶಾಸಕರ ಸಂಬಂಧಿಯನ್ನು ಬಂಧಿಸಬೇಕೆಂದು ಬಯಸಿದ್ದರು ಎಂದು ಮಾದ್ಯಮ ವರದಿ ಹೇಳಿದೆ, 

"ಸಮುದಾಯಕ್ಕೆ ಘಾಸಿಯಾಗಿದೆ,  ಪರಿಸ್ಥಿತಿ ಹತೋಟಿಯಲ್ಲಿದೆ. ದೂರು ದಾಖಲಿಸಲು ನಾನು ನಮ್ಮ ಸಮುದಾಯದ ಧಾರ್ಮಿಕ ಮುಖಂಡರೊಂದಿಗೆ ಪೊಲೀಸ್ ಠಾಣೆಯಲ್ಲಿದ್ದೇನೆ. ನಾಳೆ ನಾವು ಪ್ರತಿಭಟನೆ ನಡೆಸುತ್ತೇವೆ" ಎಂದು ಜಮೀರ್ ಅಹ್ಮದ್ ಹೇಳಿದರು

ಇನ್ನು ಪರಿಸ್ಥಿತಿ ನಿಯಂತ್ರಿಸಲು ಇದಾಗಲೇ ಪೊಲೀಸ್ ಠಾಣಾ ಆವರಣದಲ್ಲಿ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದ್ದು ಪೂರ್ವ ವಿಭಾಗದ ಎಲ್ಲಾ ಪೋಲೀಸ್ ಇನ್ಸ್​ಪೆಕ್ಟರ್​  ಹಾಗೂ ಸಿಬ್ಬಂದಿಗಳು ತಕ್ಷಣ ಕೆಜಿ ಹಳ್ಳಿ ಠಾಣೆಗೆ ಆಗಮಿಸಲು ಹಿರಿಯ ಪೋಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com