ಶ್ರೀಕೃಷ್ಣ ಜನ್ಮಾಷ್ಟಮಿ: ಮುಖ್ಯಮಂತ್ರಿ, ಗಣ್ಯರಿಂದ ಶುಭಾಶಯ

ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಭಕ್ತಿಪೂರ್ವಕ ಶುಭಕಾಮನೆಗಳು. ಭಕ್ತರ ದುಃಖಗಳನ್ನು ಪರಿಹರಿಸಲು ಅವತಾರ ತಾಳಿದ ಭಗವಂತ ಶ್ರೀಕೃಷ್ಣ, ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ, ಸುದರ್ಶನ ಚಕ್ರಧಾರಿಯಾಗಿ ಎಲ್ಲ ಆಪತ್ತುಗಳಿಂದ ರಕ್ಷಿಸಲಿ ಎಂದು ಪ್ರಾರ್ಥಿಸೋಣ ಎಂದು ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು, ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಪವಿತ್ರ ಗೋಕುಲಾಷ್ಟಮಿಯು, ನಾಡಿಗೆ ಬಂದೊದಗಿರುವ ಕೊರೊನ ಸೋಂಕು ಮತ್ತು ಅತಿವೃಷ್ಟಿಯ ವಿರುದ್ಧ ಹೋರಾಡಲು ಧನಾತ್ಮಕ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್‌ ಮಾಡಿ, ಎಲ್ಲರಿಗೂ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಬಾಲ್ಯದಲ್ಲಿ ಮುದ್ದುಕೃಷ್ಣನಾಗಿ, ತಾರುಣ್ಯದಲ್ಲಿ ಮುರಳಿ ಮೋಹನನಾಗಿ, ಧರ್ಮಯುದ್ಧದಲ್ಲಿ ಪಾರ್ಥ ಸಾರಥಿಯಾಗಿ, ಭಗವದ್ಗೀತೆ ಬೋಧಿಸಿದ ಗೀತಾಚಾರ್ಯನಾಗಿ ನಮ್ಮೆಲ್ಲರ ಆರಾಧ್ಯ ದೈವವಾಗಿರುವ ಶ್ರೀಕೃಷ್ಣ ಪರಮಾತ್ಮನ ಅನುಗ್ರಹ ನಮ್ಮ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ದನಮ್ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ || ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

ವಸತಿ ಸಚಿವ ವಿ.ಸೋಮಣ್ಣ, ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಸಚಿವರು ಶುಭಾಶಯ ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com