ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಹಾವೇರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ

ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

Published: 11th August 2020 04:19 PM  |   Last Updated: 11th August 2020 04:19 PM   |  A+A-


suicide

ಆತ್ಮಹತ್ಯೆ

Posted By : Srinivasamurthy VN
Source : UNI

ಹಾವೇರಿ: ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಾವೇರಿಯ ದ್ಯಾಮವ್ವನಗುಡಿ ಓಣಿಯ ವೈಷ್ಣವಿ ರಿತ್ತಿ (16) ಎಂಬ ವಿದ್ಯಾರ್ಥಿನಿ ಗಣಿತ ವಿಷಯದಲ್ಲಿ ಅನುತ್ತೀರ್ಣಗೊಂಡ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಹಾವೇರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅದೇ ರೀತಿ ಬ್ಯಾಡಗಿ ತಾಲ್ಲೂಕಿನ ಕಾಶಂಬಿ ಗ್ರಾಮದ ಭಾರತಿ ಕೋಟಿ (16) ಎಂಬ ವಿದ್ಯಾರ್ಥಿನಿ ಕಡಿಮೆ ಅಂಕ ಅಂದರೆ ಶೇ 61.6ರಷ್ಟು ಬಂದಿವೆ ಎಂಬ ಕಾರಣದಿಂದ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ತಕ್ಷಣ ಪಾಲಕರು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಕಾಗಿನೆಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp