ಆಗಸ್ಟ್ 14 ರವರೆಗೂ ಭಾರೀ ಮಳೆ; ಇರಲಿ ಎಚ್ಚರ!

ಈಗಾಗಲೇ ವರುಣನ ಅಟ್ಟಹಾಸಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಆ.14ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಈಗಾಗಲೇ ವರುಣನ ಅಟ್ಟಹಾಸಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಆ.14ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಕೆಲವು ದಿನ ಮಳೆಯ ಆರ್ಭಟ ಹೆಚ್ಚಾಗಲಿದೆ. 

ರಾಜ್ಯ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com