ಬಿಎಸ್ಎನ್ಎಲ್ ಕುರಿತು ಅನಂತ್ ಕುಮಾರ್ ಹೆಗ್ಡೆ ವಿವಾದಾಸ್ಪದ ಹೇಳಿಕೆ!

ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

Published: 11th August 2020 12:48 AM  |   Last Updated: 11th August 2020 12:27 PM   |  A+A-


MP_Anantkumar_Hegde1

ಅನಂತ್ ಕುಮಾರ್ ಹೆಗ್ಡೆ

Posted By : Srinivas Rao BV
Source : Online Desk

ಕುಮುಟಾ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕುಮಟಾದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಬಿಎಸ್‍ಎನ್‍ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ಆ ಸಂಸ್ಥೆಯನ್ನು ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. 

ಸಮರ್ಪಕ ಸೇವೆ ನೀಡುವುದು ಬಿಎಸ್‍ಎನ್‍ಎಲ್ ನೌಕರರಿಂದ ಸಾಧ್ಯವಿಲ್ಲ. ಈಗಾಗಲೇ 85 ಸಾವಿರ ನೌಕರರನ್ನು ಮನೆಗೆ ಕಳುಹಿಸಿದ್ದೇವೆ, ಮುಂದಿನ ದಿನಗಳಲ್ಲಿ ಮತ್ತಷ್ಟು ನೌಕರರನ್ನು ಮನೆಗೆ ಕಳುಹಿಸಿ ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಎಂದು ಹೇಳಿದ್ದಾರೆ. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp