ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್

ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 

Published: 12th August 2020 12:11 PM  |   Last Updated: 12th August 2020 01:37 PM   |  A+A-


Semanth Kumar Singh

ಸೀಮಂತ್ ಕುಮಾರ್ ಸಿಂಗ್

Posted By : Manjula VN
Source : The New Indian Express

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 

ಕೋಲಾರ, ರಾಮನಗರ, ತುಮಕೂರು, ಕೆಜಿಎಪ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ದಲ್ಲಿ ಹೈಅಲರ್ಟ್ ಆಗಿರುವಂತೆ ಹಾಗೂ ರಾತ್ರಿ ವೇಳೆ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಇದೇ ರೀತಿ ಭದ್ರತೆಯೊದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಮುಖ್ಯ ಸರ್ಕಲ್ ಗಳಲ್ಲಿ ಈಗಾಗಲೇ ಹೆಚ್ಚುವರಿಯಾಗಿ ಭದ್ರತೆ ನಿಯೋಜಿಸಲಾಗಿದೆ. ಬುಧವಾರ ಹಾಗೂ ಗುರುವಾರ ಎರಡೂ ದಿನಗಳಲ್ಲಿ ಈ ಆರು ಪ್ರದೇಶಗಳಿಗೂ ಭೇಟಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಕೋಲಾರದ ಸುತ್ತಮುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪೊಲೀಸ್ ಚೌಕಿಗಳನ್ನು ಆರಂಭಿಸಲಾಗಿದೆ. ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಕೋಲಾರ ಎಸ್'ಪಿ ಕಾರ್ತಿಕ್ ರೆಡ್ಡಿಯವರು ಹೇಳಿದ್ದಾರೆ. 

Stay up to date on all the latest ರಾಜ್ಯ news
Poll
Babri Masjid

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯ ಒದಗಿಸಲಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp