ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೋನಾ ನೆಗೆಟಿವ್, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋವಿಡ್-19ನಿಂದ ಗುಣಮುಖರಾಗಿದ್ದಾರೆ. ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ನಿರೀಕ್ಷೆಯಿದೆ.
Published: 12th August 2020 11:16 AM | Last Updated: 12th August 2020 12:48 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋವಿಡ್-19ನಿಂದ ಗುಣಮುಖರಾಗಿದ್ದಾರೆ. ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ನಿರೀಕ್ಷೆಯಿದೆ.
ಸಿಎಂ ಯಡಿಯೂರಪ್ಪ ಅವರು ಕೊರೋನಾ ಪಾಸಿಟಿವ್ ಬಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮರುದಿನವೇ ಸಿದ್ದರಾಮಯ್ಯ ಕೂಡ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೋನಾ ಜೊತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕಳೆದ ಮಂಗಳವಾರ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಒಂದು ವಾರಗಳ ಕಾಲ ಮನೆಯಲ್ಲಿಯೇ ಹೋಂ ಐಸೊಲೇಷನ್ ನಲ್ಲಿರಲಿದ್ದಾರೆ.
Former CM and leader of Opposition @siddaramaiah tested negative , he is expected to discharge on Thursday@NewIndianXpress @santwana99 @XpressBengaluru
— Ashwini M Sripad (@AshwiniMS_TNIE) August 12, 2020