ಬೆಂಗಳೂರು ಹಿಂಸಾಚಾರ: ರಾಜ್ಯ ಕಾಂಗ್ರೆಸ್ ಖಂಡನೆ; ಶಾಂತಿ ಕಾಪಾಡಲು ಸರ್ಕಾರಕ್ಕೆ ಬೆಂಬಲ ನೀಡಲು ಸಿದ್ಧ ಎಂದ ಡಿ.ಕೆ. ಶಿವಕುಮಾರ್

ಡಿಜೆ ಹಳ್ಳಿಯಲ್ಲಿ ಕಳೆದ ರಾತ್ರಿ ಸಂಭವಿಸಿದ ಹಿಂಸಾಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ಕಳೆದ ರಾತ್ರಿ ಸಂಭವಿಸಿದ ಹಿಂಸಾಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

ಘಟನೆ ಸಂಬಂಧ ಹೇಳಿಕೆ ನೀಡಿರುವ ಅವರು, ಕಳೆದ ರಾತ್ರಿ ನಡೆದ ಘಟನೆಗೆ ನಮ್ಮ ಪಕ್ಷ ತೀವ್ರ ಖಂಡನೆ ವ್ಯಕ್ತಪಡಿಸುತ್ತದೆ. ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಪೋಸ್ಟ್'ನಿಂದಾಗಿ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಶಾಂತಿ ಕಾಪಾಡುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ. 

ಇಂದು ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ. ಘಟನೆ ಸಂಬಂಧ ಈಗಾಗಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಶಾಂತಿ ಹಾಗೂ ಸೌಹಾರ್ದತೆ ಕಾಪಾಡಲು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆಂದು ತಿಳಿಸಿದ್ದಾರೆ, 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com