ಕೋವಿಡ್-19: ಆಸ್ತಿ ತೆರಿಗೆ ವಿನಾಯಿತಿ ನೀಡದ ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈ ಕೋರ್ಟ್ ನೋಟಿಸ್

ಕೊರೋನಾ ವೈರಸ್ ಸಂಕಷ್ಟ ಕಾಲದಲ್ಲಿ ಆಸ್ತಿ ತೆರಿಗೆ ವಿನಾಯಿತಿ ನೀಡದ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ವಿವರ ಕೇಳಿ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕೊರೋನಾ ವೈರಸ್ ಸಂಕಷ್ಟ ಕಾಲದಲ್ಲಿ ಆಸ್ತಿ ತೆರಿಗೆ ವಿನಾಯಿತಿ ನೀಡದ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ವಿವರ ಕೇಳಿ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ಬನಶಂಕರಿ 3ನೇ ಹಂತದ ನಿವಾಸಿ ಕೆ ಗುರುದತ್ತಾ ಎಂಬುವವರು ಸಲ್ಲಿಕೆ ಮಾಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿನಗಿ ಅವರ ಪೀಠ ವಿವರ ಕೇಳಿ ರಾಜ್ಯ ಸರ್ಕಾರ, ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿದೆ.

ಗುರುದತ್ತಾ ಅವರು ತಮ್ಮ ಅರ್ಜಿಯಲ್ಲಿ ಕೊರೋನಾ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಮಾಜದ ವಿವಿಧ ವಲಯ ಮತ್ತು ವರ್ಗಗಳಿಗೆ ಸಾಕಷ್ಟು ವಿನಾಯಿತಿ ಮತ್ತು ನೆರವು ನೀಡಿದೆ. ಆದರೆ ರಾಜ್ಯದ ವಸತಿ ಮತ್ತು ವಸತಿಯೇತರ ಕಟ್ಟಡಗಳ ಮಾಲೀಕರಿಗೆ ಯಾವುದೇ ರೀತಿಯ ವಿನಾಯಿತಿ ನೀಡಿಲ್ಲ. ಲಾಕ್ ಡೌನ್ ನಿಂದಾಗಿ ಮಾಲೀಕರು ಆಸ್ತಿ ತೆರಿಗೆ ಪಾವತಿ ಮಾಡುವ ಸ್ಥಿತಿಯಲ್ಲಿ ಇಲ್ಲ. ಬಾಡಿಗೆದಾರರು ಬಾಡಿಗೆ ಸರಿಯಾಗಿ ಬಾಡಿಗೆ ನೀಡುತ್ತಿಲ್ಲ. ಹೀಗಾಗಿ ತಮಗೆ ಆಸ್ತಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಅರ್ಜಿಯಲ್ಲಿ ಕೇಳಿದ್ದರು. 

ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿ ವಿವರ ಕೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com