ಕೊರೋನಾ ನಿಯಂತ್ರಣಕ್ಕೆ ವೈದ್ಯ ಸೀಟು ಸಂಖ್ಯೆ ದುಪ್ಪಟ್ಟು ಮಾಡಿ: ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ

ರಾಜ್ಯದಲ್ಲಿ ವೈದ್ಯ ಪದವಿ ಕೋರ್ಸ್'ಗಳು ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್'ಗಳ ಪ್ರವೇಶಾತಿ ಸಂಖ್ಯೆಯನ್ನು ದುಪ್ಪಟ್ಟು ಮಾಡಲು ಹಾಗೂ ಅಂತಿಮ ವರ್ಷದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಕೋರ್ಸ್'ಘಳ ವಿದ್ಯಾರ್ಥಿಗಳನ್ನು ಕೋವಿಡ್ ನಿಯಂತ್ರಣ ಚಟುವಟಿಕೆಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿಕೊಂಡಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ವೈದ್ಯ ಪದವಿ ಕೋರ್ಸ್'ಗಳು ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್'ಗಳ ಪ್ರವೇಶಾತಿ ಸಂಖ್ಯೆಯನ್ನು ದುಪ್ಪಟ್ಟು ಮಾಡಲು ಹಾಗೂ ಅಂತಿಮ ವರ್ಷದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಕೋರ್ಸ್'ಘಳ ವಿದ್ಯಾರ್ಥಿಗಲನ್ನು ಕೋವಿಡ್ ನಿಯಂತ್ರಣ ಚಟುವಟಿಕೆಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದೆ.

ಮಂಗಳವಾರ ಕೋವಿಡ್ ಪ್ರಕರಣ ಹೆಚ್ಚಿರುವ ಕರ್ನಾಟಕ ಸೇರಿದಂತೆ 10 ರಾಜ್ಯಗಳ ಸಚಿವರ ಜೊತೆ ಪ್ರಧಾನಿ ಮೋದಿಯವರು ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಪರವಾಗಿ ಭಾಗಿಯಾಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೋವಿಡ್ ನಿಯಂತ್ರಣಕ್ಕೆ ಈವರೆಗೆ ಕೈಗೊಂಡಿರುವ ಕ್ರಮ, ಚಿಕಿತ್ಸಾ ಸೌಲಭ್ಯ ಕುರಿತು ಅಂಕಿ-ಅಂಶಗಳೊಂದಿಗೆ ವಿವರಿಸಿ, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕೆಲವು ಬೇಡಿಕೆ ಸಲ್ಲಿಸಿ ಅನುಮತಿ ನೀಡುವಂತೆ ಕೋರಿದರು. 

ಕೋವಿಡ್ ನಿಂದಾಗಿ ಸದ್ಯ ಅಂತಿಮ ವರ್ಷದ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಕೋರ್ಸ್'ಗೆ ಅನುಮತಿ ನೀಡಿದರೆ ಈ ವಿದ್ಯಾರ್ಥಿಗಳನ್ನು ಕೋವಿಡ್ ನಿಯಂತ್ರಣ ಸಂಬಂಧ ಬೇರೆ ರೀತಿಯ ಚಟುವಟಿಕೆಗಳನ್ನು ಬಳಸಲು ಅವಕಾಶ ಆಗುತ್ತದೆ. ಆದ್ದರಿಂದ ಕೋರ್ಸ್ ಆರಂಭಕ್ಕೆ ಅನುಮತಿ ನೀಡಬೇಕೆಂದು ಕೋರಲಾಯಿತು. 

ಸದ್ಯ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ವರ್ಷ 10 ಸಾವಿರ ಪದವಿ ಹಾಗೂ 2 ಸಾವಿರ ಸ್ನಾತಕೋತ್ತರ ಸೀಟುಗಳಿಗೆ ಪ್ರವೇಶಾತಿ ನೀಡಲಾಗುತ್ತಿದ್ದು ಈ ಸಂಖ್ಯೆಯನ್ನು ದುಪ್ಪಟ್ಟು ಮಾಡಬೇಕು. ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ನಂತರ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ವರ್ಷ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ಸಂಬಂಧ ಮಾರ್ಗಸೂಚಿ ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು. 

ರೋಗಿಗಳಿಗೆ ಚಿಕಿತ್ಸ ನೀಡಲು ಲಿಕ್ವಿಡ್ ಆಕ್ಸಿಜನ್ ಆಗತ್ಯವಾಗಿರುತ್ತದೆ. ಸದ್ಯ ಗುಜರಾತ್ ನಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಸುವ ಘಟಕವಿದೆ. ಈ ಕಂಪನಿಗೆ ರಾಜ್ಯದಲ್ಲಿ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಪ್ರಧಾನಿಗೆ ಮನವಿ ಮಾಡಿಕೊಳ್ಳಲಾಗಿದೆ. 

ಸಭೆಯಲ್ಲಿ ಭಾಗಿಯಾಗಿದ್ದ ತೆಲಂಗಾಣ ಮುಖ್ಯಮಂತ್ರಿಗಳೂ ಕೂಡ ಜನಸಂಖ್ಯೆಗೆ ಅನುಗುಣವಾಕಿ ವೈದ್ಯರನ್ನು ನೀಡಲು ವೈದ್ಯ ಪದವಿ ಹಾಗೂ ಸ್ನಾತಕೋತ್ತರ ಸೀಟುಗಳ ಸಂಖ್ಯೆ ಹೆಚ್ಚಿಸುವಂತೆ ಮನವಿ ಮಾಡಿದರು. ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com