ಕರ್ನಾಟಕ ಲೋಕ ಸೇವಾ ಆಯೋಗದ ಪರೀಕ್ಷೆಗಳ ದಿನಾಂಕ ಪ್ರಕಟ!

ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. 

Published: 12th August 2020 07:49 PM  |   Last Updated: 12th August 2020 07:49 PM   |  A+A-


KPSC

ಕರ್ನಾಟಕ ಲೋಕ ಸೇವಾ ಆಯೋಗ

Posted By : Vishwanath S
Source : UNI

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. 

ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ 'ಎ' ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗದಲ್ಲಿ ನಡೆಸಲಾಗುತ್ತದೆ. 

2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಇದೇ ತಿಂಗಳ 18ರಿಂದ ಸೆಪ್ಟಂಬರ್ 16ರವರೆಗೆ ನಡೆಯಲಿದೆ.

ಇದೇ 24ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 106 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ನಡೆಯುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp