ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ

ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಪಿ ನವೀನ್ ನನ್ನು ಬಂಧಿಸಲಾಗಿದೆ.
ಅಖಂಡ ಶ್ರೀನಿವಾಸ ಮೂರ್ತಿ ಮನೆ ಮುಂದೆ ನಿನ್ನೆ ರಾತ್ರಿ ಕಂಡುಬಂದ ದೃಶ್ಯ
ಅಖಂಡ ಶ್ರೀನಿವಾಸ ಮೂರ್ತಿ ಮನೆ ಮುಂದೆ ನಿನ್ನೆ ರಾತ್ರಿ ಕಂಡುಬಂದ ದೃಶ್ಯ

ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಪಿ ನವೀನ್ ನನ್ನು ಬಂಧಿಸಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ಗುಂಪು ಕಳೆದ ರಾತ್ರಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಮೇಲೆ ಏಕಾಏಕಿ ದಾಳಿ ನಡೆಸಿ  ತೀವ್ರ ದಾಂಧಲೆ ನಡೆಸಿತ್ತು.ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸ್ ವಾಹನದ ಮೇಲೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆ ರಾಜ್ಯದಲ್ಲಿ ಮತ್ತೊಂದು ಗುಂಪು ಗಲಭೆಗೆ ಸಾಕ್ಷಿಯಾಯಿತು.

ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ ಸುಮಾರು 60 ಮಂದಿ ಪೊಲೀಸ್ ಸಿಬ್ಬಂದಿ ಗಲಭೆಯಲ್ಲಿ ಗಾಯಗೊಂಡಿದ್ದಾರೆ. ಈ ಸಂಬಂಧ ಇದುವರೆಗೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಜನರು ಗಲಭೆ ಸೃಷ್ಟಿಸದೆ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸೆಕ್ಷನ್ 144ನ್ನು ಜಾರಿಗೊಳಿಸಲಾಗಿದೆ. ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕರ್ಫ್ಯೂ ಹೇರಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com