ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಖಾಸಗಿ ಆಸ್ಪತ್ರೆಗಳ ಬಳಸದಿರುವ ಹಾಸಿಗೆಗಳ ವಶಕ್ಕೆ ಬಿಬಿಎಂಪಿ ನಿರ್ಧಾರ!

ವೈದ್ಯರು ಹಾಗೂ ಮೂಲಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ವಶಕ್ಕೆ ಪಡೆದು ಉಳಿದವುಗಳನ್ನು ಸೀಲ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ. 

ಬೆಂಗಳೂರು: ವೈದ್ಯರು ಹಾಗೂ ಮೂಲಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ವಶಕ್ಕೆ ಪಡೆದು ಉಳಿದವುಗಳನ್ನು ಸೀಲ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ. 

ಬುಧವಾರ ಬಿಬಿಎಂಪಿ ಆಯುಕ್ತರು, ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹಾಗೂ ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ನಗರದ 50ರಿಂದ 100 ಹಾಸಿಗೆ ಸಾಮರ್ಥ್ಯವಿರುವ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಯಿತು. 

ಈ ವೇಳೆ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರು ಸಿಬ್ಬಂದಿ, ವೈದ್ಯರ ಸಮಸ್ಯೆಯಿಂದ ಕಡಿಮೆ ಪ್ರಮಾಣದಲ್ಲಿ ಹಾಸಿಗೆಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಆಸ್ಪತ್ರೆ ಅನುಮದಿ ಪಡೆದಷ್ಟು ಹಾಸಿಗೆ ಬಳಕೆ ಮಾಡುತ್ತಿಲ್ಲ. ಹೀಗಾಗಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರ ಮತ್ತು ಬಿಬಿಎಂಪಿಯಿಂದ ಶಿಫಾರಸು ಮಾಡುವ ಕೊರೋನಾ ಸೋಂಕಿತರಿಗೆ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ ಎಂಬುದು ಸೇರಿದಂತೆ ವಿವಿಧ ಸಮಸ್ಯೆ ಹೇಳಿಕೊಂಡರು. 

ಇದಕ್ಕೆ ಸಂಬಂಧಿಸಿದ ಬಿಬಿಎಂಪಿ ಹಾಗೂ ಆರೋಗ್ಯ ಅಧಿಕಾರಿಗಳು ಸದ್ಯ ಬಳಕೆ ಮಾಡುತ್ತಿರುವ ಹಾಸಿಗೆಯಲ್ಲಿ ಶೇ.50ರಷ್ಟು ಹಾಸಿಗೆಯನ್ನು ಸರ್ಕಾರಕ್ಕೆ ಬಿಟ್ಟುಕೊಡಿ. ಉಳಿದ ಹಾಸಿಗೆಗಳನ್ನು ತಾತ್ಕಾಲಿಕವಾಗಿ ಸೀಲ್ ಮಾಡಲಾಗುವುದು ಎಂದು ತಿಳಿಸಿದರು. 

Related Stories

No stories found.

Advertisement

X
Kannada Prabha
www.kannadaprabha.com