ಕೋವಿಡ್-19: ಸಂಪರ್ಕಿತರ ಪತ್ತೆಹಚ್ಚುವಿಕೆ ತೀವ್ರ, ಬಿಬಿಎಂಪಿಯಿಂದ ಹೆಚ್ಚಿನ ಸಿಬ್ಬಂದಿ ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ಕೋವಿಡ್-19 ಸಂಪರ್ಕಿತರ ಪತ್ತೆಗಾಗಿ ಸಿಬ್ಬಂದಿಯನ್ನು ಹೆಚ್ಚಿಸಲು ಬಿಬಿಎಂಪಿ ನಿರ್ಧರಿಸಿದೆ.
ಬೂತ್ ಮಟ್ಟದ ಅಧಿಕಾರಿಗಳು
ಬೂತ್ ಮಟ್ಟದ ಅಧಿಕಾರಿಗಳು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ಕೋವಿಡ್-19 ಸಂಪರ್ಕಿತರ ಪತ್ತೆಗಾಗಿ ಸಿಬ್ಬಂದಿಯನ್ನು ಹೆಚ್ಚಿಸಲು ಬಿಬಿಎಂಪಿ ನಿರ್ಧರಿಸಿದೆ.

ಈ ಸಂಬಂಧ ಪ್ರಸ್ತಾವವನ್ನು ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅವರಿಗೆ ಬಿಬಿಎಂಪಿ ಕಳುಹಿಸಿದೆ ಎಂದು ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಬಿಬಿಎಂಪಿ ಪ್ರಕಾರ, 1,26,830 ಜನರು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಈ ಪೈಕಿ 8 ಸಾವಿರ ಅಂತರ್ ರಾಜ್ಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದು, 12 ಸಾವಿರ ಜನರು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರಾಗಿದ್ದಾರೆ.

ಬಿಬಿಎಂಪಿಯ ಸುಮಾರು 2700 ವಾರ್ಡ್ ಮತ್ತು 30 ಸಾವಿರ ಬೂತ್ ಮಟ್ಟದ ಅಧಿಕಾರಿಗಳು  ಸಂಪರ್ಕಿತರ ಪತ್ತೆ ಹಾಗೂ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ. ಇದನ್ನು ಹೊರತುಪಡಿಸಿದಂತೆ 25,600 ಸ್ವಯಂ ಸೇವಕರಿದ್ದಾರೆ.ಈ ಪೈಕಿ 8 ಸಾವಿರ ಸ್ವಯಂ ಸೇವಕರು ಯಾವಾಗ ಬೇಕಾದರೂ ಸಕ್ರಿಯವಾಗುವಂತರಾಗಿದ್ದಾರೆ. ಸದ್ಯಕ್ಕೆ ಇದು ಸಾಕು,ಆದರೆ, ಎರಡು ದಿನಗಳೊಳಗೆ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ಹೇಳಿದ್ದಾರೆ.

ಪ್ರತಿದಿನ 35 ಸಾವಿರ ಜನರನ್ನು ಪತ್ತೆ ಹಚ್ಚಲಾಗುತ್ತಿದೆ. ಕೋವಿಡ್ ರೋಗಿಗಳ ಬಗ್ಗೆ ತಪ್ಪು ಮಾಹಿತಿಯಿಂದ ಅತೃಪ್ತಿಯಾಗಿದೆ. ಆದರೆ, ಆ ಬಗ್ಗೆ ವ್ಯವಹರಿಸಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಅನ್ಬು ಕುಮಾರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com