ಸಚಿವ ಶ್ರೀರಾಮುಲು ತಾಯಿ, ಸೋದರನಿಗೂ ಕೊರೋನಾ ಪಾಸಿಟಿವ್‌ 

ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೋನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಅವರ ತಾಯಿ ಮತ್ತು ಸಹೋದರರೊಬ್ಬರಿಗೂ ಸೋಂಕು ದೃಢಪಟ್ಟಿದೆ.
ಶ್ರೀರಾಮುಲು
ಶ್ರೀರಾಮುಲು

ಬೆಂಗಳೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಕೊರೋನಾ ಸೋಂಕು ಪತ್ತೆಯಾದ ಬೆನ್ನಲ್ಲೇ ಅವರ ತಾಯಿ ಮತ್ತು ಸಹೋದರರೊಬ್ಬರಿಗೂ ಸೋಂಕು ದೃಢಪಟ್ಟಿದೆ.

ಬುಧವಾರ ಅವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿಯಲ್ಲಿದ್ದ ಸಚಿವರ ತಾಯಿ ಹೊನ್ನೂರಮ್ಮ (80) ಮತ್ತು ಸಹೋದರ ಶ್ರೀನಿವಾಸಲು (42) ಅವರಿಗೆ ಕೋವಿಡ್‌ ಪರೀಕ್ಷಾ ವರದಿಯಲ್ಲಿ ಬುಧವಾರ ಪಾಸಿಟಿವ್‌ ಬಂದಿದೆ. 

ತಕ್ಷಣ ಅವರನ್ನು ಬಳ್ಳಾರಿಯಿಂದ ಬೆಂಗಳೂರಿಗೆ ಕರೆತಂದು ಸಚಿವ ಶ್ರೀರಾಮುಲು ಅವರು ದಾಖಲಾಗಿರುವ ಬೌರಿಂಗ್‌ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಿಸಲಾಗಿದೆ. ಇಬ್ಬರ ಆರೋಗ್ಯ ಸ್ಥಿರವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಸಚಿವ ಶ್ರೀರಾಮುಲು ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಯಾವುದೇ ಲಕ್ಷಣಗಳಿಲ್ಲ ಆರೋಗ್ಯವಾಗಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ವಿಶೇಷ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಕೊರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com