ಗದಗ: ವೆಂಟಿಲೇಟರ್ ಕೊರತೆ ಕಾರಣ ಗಂಭೀರ ಸ್ಥಿತಿಯ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಮ್ಸ್ ನಕಾರ!

ಕಳೆದೊಂದು ತಿಂಗಳಿನಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಪರಿಣಾಮ ವೆಂಟಿಲೇಟರ್ ಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವ ಜಿಮ್ಸ್ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಸೂಚಿಸುತ್ತಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಗದಗ: ಕಳೆದೊಂದು ತಿಂಗಳಿನಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಪರಿಣಾಮ ವೆಂಟಿಲೇಟರ್ ಗಳ ಕೊರತೆ ಎದುರಾದ ಹಿನ್ನೆಲೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವ ಜಿಮ್ಸ್ ಆಸ್ಪತ್ರೆಯು ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಸೂಚಿಸುತ್ತಿದೆ ಎಂದು ತಿಳಿದುಬಂದಿದೆ. 

ಜಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು 18 ವೆಂಟಿಲೇಟರ್ ಗಳ ವ್ಯವಸ್ಥೆ ಇದ್ದು, ಈಗಾಗಲೇ ಎಲ್ಲವನ್ನೂ ಬಳಕೆ ಮಾಡಲಾಗುತ್ತಿದೆ. ಇದರಿಂದ ಆಸ್ಪತ್ರೆಗೆ ಹೊಸದಾಗಿ ಬರುತ್ತಿರುವ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿಬ್ಬಂದಿಗಳು ಸಮಸ್ಯೆ ಎದುರಿಸವಂತಾಗಿದೆ. ಕಳೆದೊಂದು ತಿಂಗಳಿನಲ್ಲಿ ಆಸ್ಪತ್ರೆಯಲ್ಲಿ 50ಕ್ಕೂ ಹೆಚ್ಚು ಮಂದಿ ಸೋಂಕಿತರು ದಾಖಲಾಗಿದ್ದು, ಇತರೆ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೇರೆ ದಾರಿಯಿಲ್ಲದೆ, ರೋಗಿಗಳು ಇದೀಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯತ್ತ ಮುಖ ಮಾಡುವಂತಾಗಿದೆ. 

ಬೆಟಗೆರಿ ನಿವಾಸಿ ಶ್ರೀನಿವಾಸ ಬೋಳಪ್ಪನವರ್ ಮಾತನಾಡಿ, ಜಿಮ್ಸ್ ಆಸ್ಪತ್ರೆಗೆ ಬರುವ ಬಹುತೇಕರು ಬಿಪಿಎಲ್ ಕಾರ್ಡ್ ಇರವವರೇ ಆಗಿಸುತ್ತಾರೆ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಹೋಗುವಂತೆ ಅವರಿಗೆ ತಿಳಿಸಲು ಸಾಧ್ಯವಾಗುವುದಿಲ್ಲ. ಆಸ್ಪತ್ರೆಯಲ್ಲಿ ಸೋಂಕಿತರ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿರುವುದರಿಂದ ಇದೀಗ ಗಂಭೀರ ಸ್ಥಿತಿಯಲ್ಲಿರುವ ಜನರನ್ನೂ ದಾಖಲು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತರೆ ಆಸ್ಪತ್ರೆಗಳಿಗೆ ದಾಖಲಾಗುವಂತೆ ತಿಳಿಸಲಾಗುತ್ತಿದೆ ಎಂದು ಜಿಮ್ಸ್ ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೊರೋನಾ ಸೋಂಕಿಲ್ಲದ ರೋಗಿಗಳಿಗೆ ಚಿಕಿತ್ಸೆ ನೀಡಲು ಹೆಚ್ಚುವರಿಯಾಗಿ ವೆಂಟಿಲೇಟರ್ ಗಳನ್ನು ತರಿಸುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿಕೊಳ್ಳಲಾಗಿದೆ. ಈ ವರೆಗೂ ಆಸ್ಪತ್ರೆಯಲ್ಲಿರುವ 15 ವೆಂಟಿಲೇಟರ್ ಗಳು ಬಳಕೆಯಲ್ಲಿವೆ. ಜಿಲ್ಲೆಯಲ್ಲಿರುವ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಯಂತ್ರಗಳ ಕೊರತೆ ಹೆಚ್ಚಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com