ತಲಕಾವೇರಿ ದೇವಾಲಯದಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕು ತಲ ಕಾವೇರಿಯಲ್ಲಿ ಶ್ರೀ ತಲಕಾವೇರಿ ದೇವಾಲಯದಲ್ಲಿ ಇಂದು ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ತಲಕಾವೇರಿ ದೇವಾಲಯದಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ

ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕು ತಲ ಕಾವೇರಿಯಲ್ಲಿ ಶ್ರೀ ತಲಕಾವೇರಿ ದೇವಾಲಯದಲ್ಲಿ ಇಂದು ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಇತ್ತೀಚೆಗೆ ಸಂಭವಿಸಿದ ಭೂಕುಸಿತದ ಪರಿಣಾಮವಾಗಿ ದೇವಾಲಯದ ಮಾರ್ಗವು ಮುಚ್ಚಿದ್ದುದ್ದರಿಂದ ಶ್ರೀ ತಲಕಾವೇರಿ ದೇವಾಲಯದಲ್ಲಿ ದೈನಂದಿನ ಪೂಜಾ ಕಾರ್ಯಗಳಿಗೆ ಅಡಚಣೆಯುಂಟಾಗಿತ್ತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ದೇವಾಲಯದ ಸಮಿತಿಯವರು ಸೇರಿ ದೇವಾಲಯದಲ್ಲಿ ಪೂಜೆ ಆರಂಭಿಸಲು ತೀರ್ಮಾನಿಸಿದ್ದರು.

ಅದರಂತೆ ದೇವಾಲದಯದಲ್ಲಿ ಕ್ಷೇತ್ರದ ತಂತ್ರಿಯವರಾದ ಎಚ್ಚಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಮತ್ತು ತಂಡದವರು ದೇವಾಲದಯದಲ್ಲಿ ಪುಣ್ಯಾಹ, ಗಣಹೋಮ, ರುದ್ರಾಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಪೂಜಾ ಕಾರ್ಯವನ್ನು ನೆರವೇರಿಸಿ ಶ್ರೀ ತಲಕಾವೇರಿ ದೇವಾಲಯದಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com