ಡಿ.ಜೆ.ಹಳ್ಳಿ ಗಲಭೆ: 80 ಆರೋಪಿಗಳು ಬಳ್ಳಾರಿ ಜೈಲ್ ಗೆ ಸ್ಥಳಾಂತರ

ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ 80 ಆರೋಪಿಗಳನ್ನು ಗಡಿನಾಡು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

Published: 14th August 2020 11:47 AM  |   Last Updated: 14th August 2020 12:48 PM   |  A+A-


DJ Halli violence

ಡಿಜೆ ಹಳ್ಳಿ ಗಲಭೆ ಆರೋಪಿಗಳು

Posted By : srinivasamurthy
Source : UNI

ಬಳ್ಳಾರಿ: ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ 80 ಆರೋಪಿಗಳನ್ನು ಗಡಿನಾಡು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಗುಪ್ತವಾಗಿ ಮಾಹಿತಿ ಸೋರಿಕೆ ಆಗದಂತೆ ಜೈಲಾಧಿಕಾರಿಗಳಿಗೂ ವಿಷಯ ತಿಳಸದೇ ಪೊಲೀಸರು ಆರೋಪಿಗಳನ್ನು ರಾತ್ರೋರಾತ್ರಿ ಬಳ್ಳಾರಿಗೆ ಕರೆದೊಯ್ದಿದ್ದಾರೆ. ಅಧಿಕಾರಿಗಳಿಗೆ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ಈಗ ಜೈಲಿನಲ್ಲಿ ಸಿಬ್ಬಂದಿ ಗಳು ಬ್ಯಾರಕ್ ಗಳನ್ನು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 206 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಕಳೆದ ರಾತ್ರಿ ಹಲವೆಡೆ ದಾಳಿ ಮಾಡಿ ಕಾರ್ಪೋರೇಟರ್ ಇರ್ಷಾದ್ ಬೇಗಂ ಪತಿ ಕಲೀಂ ಪಾಷಾ ಸೇರಿದಂತೆ 80 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp