ವಿವಾದಾತ್ಮಕ ಪೋಸ್ಟ್ ಮಾಡಿದ್ದೆ: ಆರೋಪಿ ನವೀನ್ ತಪ್ಪೊಪ್ಪಿಗೆ

ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಹಾಕಿರುವುದಾಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ.
ಗಲಭೆ ವೇಳೆ ಸ್ಥಳದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು
ಗಲಭೆ ವೇಳೆ ಸ್ಥಳದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು

ಬೆಂಗಳೂರು: ಪ್ರವಾದಿ ನಿಂದನೆಯ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಹಾಕಿರುವುದಾಗಿ ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ಆರೋಪಿ ನವೀನ್ ತಪ್ಪೊಪ್ಪಿಕೊಂಡಿದ್ದಾನೆ.

ಡಿಜೆ ಹಳ್ಳಿ‌ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿ ನವೀನ್ ಅನ್ನು ಪೂರ್ವ ವಿಭಾಗದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ, ತಾನು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಕಮೆಂಟ್ ಜತೆಗೆ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

7 ಗಂಟೆ ಸುಮಾರಿಗೆ ಪೋಸ್ಟ್ ಮಾಡಿ 8 ಗಂಟೆಗೆ ಅದನ್ನು ಡಿಲೀಟ್ ಮಾಡಿದ್ದೆ. ಆದರೆ, ಆ ಒಂದು ಪೋಸ್ಟ್ ನಿಂದಾಗಿ ಇಂತಹ ಘಟನೆಗಳು ನಡೆಯುತ್ತವೆ ಎಂದು ತಾನು ಊಹಿಸಿರಲಿಲ್ಲ ಎಂದು ನವೀನ್ ಪೊಲೀಸರಿಗೆ ತಿಳಿಸಿದ್ದಾನೆ.

ಆದರೆ, ಇದುವರೆಗೂ ಆರೋಪಿ ನವೀನ್ ಮೊಬೈಲ್ ಮಾತ್ರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಈ ಪೋಸ್ಟ್‌ನಿಂದಾಗಿ ಕೆ.ಜಿ.ಹಳ್ಳಿ, ಡಿಜೆಹಳ್ಳಿ, ಕಾವಲ್‌ಬೈರಸಂದ್ರದಲ್ಲಿ ಗಲಭೆ ಉಂಟಾಗಿ ದುಷ್ಕರ್ಮಿಗಳು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಈ ವೇಳೆ ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಮೂವರು ಯುವಕರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com