ತಮಿಳುನಾಡು ಗಡಿಯಲ್ಲಿ ಪ್ರವೇಶಕ್ಕೆ ನಿರ್ಬಂಧ: ಸರ್ಕಾರದಿಂದ ವಿವರಣೆ ಕೇಳಿದ ಹೈಕೋರ್ಟ್

ಶಿಷ್ಟಾಚಾರದ ಕಾರಣ ನೆರೆಯ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಅನೇಕಲ್ ಮತ್ತು ಹೊಸೂರು ತಾಲೂಕಿನ ಅಸಂಘಟಿತ ವಲಯದ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಹೈಕೋರ್ಟ್ ಗೆ ಸಲ್ಲಿಸಲಾಗಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಶಿಷ್ಟಾಚಾರದ ಕಾರಣ ನೆರೆಯ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಅನೇಕಲ್ ಮತ್ತು ಹೊಸೂರು ತಾಲೂಕಿನ ಅಸಂಘಟಿತ ವಲಯದ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಹೈಕೋರ್ಟ್ ಗೆ ಸಲ್ಲಿಸಲಾಗಿದೆ.ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕರ್ನಾಟಕ ಸರ್ಕಾರದಿಂದ ವಿವರಣೆ ಬಯಸಿದೆ.

ವೃತ್ತಿಯಲ್ಲಿ ವಕೀಲರಾಗಿರುವ ಎಂ.ಇಂದಿರಾ ಪ್ರಿಯಾದರ್ಶಿನಿ ಈ ಅರ್ಜಿ ಸಲ್ಲಿಸಿದ್ದು,  ರಾಜ್ಯಕ್ಕೆ ಪ್ರವೇಶಿಸುವ ಮುನ್ನ ಪ್ರತಿಯೊಬ್ಬರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಬೇಕೆಂದು ಸರ್ಕಾರ ಕಡ್ಡಾಯ ಮಾಡಿರುವುದರಿಂದ ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಹೊಸೂರು ಮತ್ತು ಅನೇಕಲ್ ತಾಲೂಕಿನ ನೂರಾರು ಜನರು ತಮ್ಮ ದಿನನಿತ್ಯದ ಬದುಕಿಗಾಗಿ ತೀವ್ರ ತೊಂದರೆ ಎದುರಿಸುವಂತಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಉದ್ಯೋಗಿಗಳು ನೀಡಿರುವ ಐಡಿ ಕಾರ್ಡ್ ಗಳನ್ನು ಅಪ್ ಲೋಡ್ ಮಾಡಿದ ನಂತರ ಇ-ಪಾಸುಗಳು ದೊರೆಯುತ್ತಿವೆ. ಆದರೆ, ಅಸಂಘಟಿತ ವಲಯದ ಕಾರ್ಮಿಕರಿಗೆ ಯಾವುದೇ ರೀತಿಯ ಕಾರ್ಡ್ ಗಳನ್ನು ನೀಡಿಲ್ಲ. ಇದರಿಂದಾಗಿ ಅಂತರ್ ರಾಜ್ಯ ಗಡಿಯಲ್ಲಿ ಅವರ ಚಲಿಸುವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಅವರು ವಾದಿಸಿದರು.

ಹೊಸೂರು ಮತ್ತು ಅನೇಕಲ್ ತಾಲೂಕಿನಿಂದ ಅನೇಕ ಜನರು ತಮ್ಮ ದಿನನಿತ್ಯದ ಬದುಕಿಗಾಗಿ ಪ್ರತಿನಿತ್ಯ ರಾಜ್ಯಕ್ಕೆ ಪ್ರವೇಶಿಸಬೇಕಾಗಿದೆ. ಆದರೆ,ಅವರು ದಿನದ ಆಧಾರದಲ್ಲಿ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಗಂಟೆಗಟ್ಟಲೇ ಕಾಯಬೇಕಾಗಿದೆ. ಕೇಂದ್ರ ಸರ್ಕಾರದ ಅನ್ ಲಾಕ್ ಮಾರ್ಗಸೂಚಿಗೆ ವಿರುದ್ಧವಾಗಿ ಕರ್ನಾಟಕ ಸರ್ಕಾರ ನಿರ್ಬಂಧ ಹೇರಿದೆ. ಆದ್ದರಿಂದ ಗಡಿ ಭಾಗದಲ್ಲಿ ವಾಸಿಸುತ್ತಿರುವ ಜನರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅವರು ಹೇಳಿದರು.

ಅನ್ ಲಾಕ್ 3 ಮಾರ್ಗಸೂಚಿಗಳ ಪ್ರಕಾರ ಅಂತರ್ ರಾಜ್ಯ ಮತ್ತು ರಾಜ್ಯದೊಳಗೆ ವ್ಯಕ್ತಿ ಮತ್ತು ಸರಕು ಸಾಗಣೆಗೆ ಯಾವುದೇ ನಿರ್ಬಂಧ ವಿಧಿಸಬಾರದು, ಓಡಾಟಕ್ಕೂ ಯಾವುದೇ ವಿಶೇಷ ಅನುಮತಿ ಬೇಕಾಗಿಲ್ಲ ಎಂದು ನ್ಯಾಯಪೀಠ ಹೇಳಿತು.

ಆದಾಗ್ಯೂ, ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಗಳ ಪ್ರಕಾರ,  ಇತರ ರಾಜ್ಯಗಳಿಂದ ಬರುವವರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗುವುದನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಸರ್ಕಾರದಿಂದ ವಿವರಣೆ ಬಯಸಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com