ಕಂಟೈನ್ಮೆಂಟ್ ಝೋನ್'ನಲ್ಲಿರುವ ಸೋಂಕಿತರ ನಿರ್ವಹಣೆಯೇ ಅಧಿಕಾರಿಗಳಿಗೆ ದೊಡ್ಡ ಸವಾಲು!

ಕೊರೋನಾ ಕಂಟೈನ್ಮೆಂಟ್ ಝೋನ್ ನಲ್ಲಿರುವ ಸೋಂಕಿತರ ನಿಭಾವಣೆ  ಬಿಬಿಎಂಪಿ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಕಂಟೈನ್ಮೆಂಟ್ ಝೋನ್ ನಲ್ಲಿರುವ ಸೋಂಕಿತರ ನಿಭಾವಣೆ  ಬಿಬಿಎಂಪಿ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 

ಆಗಸ್ಟ್ 12ರವರೆಗಿನ ವರದಿಗಳ ಪ್ರಕಾರ ನಗರದಲ್ಲಿ ಒಟ್ಟಾರೆ ನಗರದಲ್ಲಿ ಒಟ್ಟು 30,729 ಕಂಟೈನ್ಮೆಂಟ್ ಝೋನ್ ಗಳಿದ್ದು, ಇದರಲ್ಲಿ 39,890 ಸೋಂಕಿತರಿದ್ದಾರೆಂದು ಹೇಳಲಾಗುತ್ತಿದೆ. ಈ ಸಂಖ್ಯೆ ಹೆಚ್ಚಾದಷ್ಟು ಸಮಸ್ಯೆ ಉದ್ಭವಿಸುವ ಕಾರಣ ಇದೀಗ ಬಿಬಿಎಂಪಿ ಅಧಿಕಾರಿಗಳು ಹೋಮ್ ಕ್ವಾರಂಟೈನ್ ನಲ್ಲಿರುವ ಜನರು ಆಸ್ಪತ್ರೆಗಳಿಗೆ ದಾಖಲಾಗುವಂತೆ ತಿಳಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. 

ನನಗೆ ಕೊರೋನಾ ಪಾಸಿಟಿವ್ ಬಂದಿದ್ದು, ಲಕ್ಷಣಗಳು ಕಂಡು ಬಂದಿಲ್ಲ. ಹೀಗಾಗಿ ಮನೆಯಲ್ಲಿಯೇ ಐಸೋಲೇಷನ್ ನಲ್ಲಿರುವ ಆಯ್ಕೆ ನನಗಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು ಇದಕ್ಕೆ ಒಪ್ಪುತ್ತಿಲ್ಲ. ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ, ಕಂಟೈನ್ಮೆಂಟ್ ಝೋನ್ ನಿಭಾವಣೆ ಕಷ್ಟಕರವಾಗಿದ್ದು, ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿದರೆ, ಕೆಲಸ ಸುಲಭವಾಗುತ್ತದೆ ಎಂದು ಹೇಳುತ್ತಿದ್ದಾರೆಂಗು ಕೊರೋನಾ ಸೋಂಕಿತ ವ್ಯಕ್ತಿ ಮಹೇಶ್ ಕೆ ಎಂಬುವವರು ಹೇಳಿದ್ದಾರೆ. 

ಸರ್ಕಾರ ನಿಯೋಜಿಸಿರುವ ಶಿಕ್ಷಕರು ಸಮೀಕ್ಷೆ ನಡೆಸಲು ಬಂದಾಗ ನನಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವಿಚಾರವನ್ನು ಬಿಬಿಎಂಪಿಗೆ ತಿಳಿಸಿ ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದ್ದರು. ಪರಿಸ್ಥಿತಿಯನ್ನು ಬಿಬಿಎಂಪಿ ಅಧಿಕಾರಿಗಳಿಗೆ ವಿವರಿಸಿದ್ದರೂ, ಅವರು ಒಪ್ಪುತ್ತಿಲ್ಲ ಎಂದು ತಿಳಿಸಿದ್ದಾರೆ. 

ಸೋಂಕಿತರ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಮಾನವ ಬಲದ ಅಗತ್ಯತೆಯೂ ಹೆಚ್ಚಾಗುತ್ತದೆ. ಸೋಂಕಿತ ಪ್ರದೇಶಗಳನ್ನು ಸೀಲ್ ಡೌನ್ ಮಾಡುವುದು, ಹೋಂ ಐಸೋಲೇಷನ್ ನಲ್ಲಿರುವುದನ್ನು ಪ್ರತೀನಿತ್ಯ ಪರಿಶೀಲನೆ ನಡೆಸುವುದು ಕಠಿಣವಾಗುತ್ತದೆ. ಹೀಗಾಗಿ ಸೋಂಕಿತನರ್ನು ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲು ಮಾಡುವುತು ಉತ್ತಮ ಆಯ್ಕೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಇನ್ನು ಕೆಲ ಪ್ರಕರಣಗಳಲ್ಲಿ ಕೆಲ ಸ್ಥಳೀಯರು, ತಮಗೆ ಕೊರೋನಾ ಪಾಸಿಟಿವ್ ಬಂದಿರುವ ವಿಚಾರವನ್ನು ಬಹಿರಂಗಪಡಿಸದಂತೆ ಮನವಿ ಮಾಡಿಕೊಳ್ಳುತ್ತಿದ್ದು, ಬಿಬಿಎಂಪಿ ಅಧಿಕಾರಿಗಳು ಬರುವುದು, ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡದಿರುವಂತೆ ನೋಡಿಕೊಳ್ಳುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com