ಮಂಗಳೂರಿನಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೆ ಜಿಲ್ಲಾಡಳಿತ ಚಿಂತನೆ

ಕೋವಿಡ್-19 ಪ್ಲಾಸ್ಮಾ ಬ್ಯಾಂಕ್ ನ್ನು ಮಂಗಳೂರಿನಲ್ಲಿ ಸ್ಥಾಪಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. 
ಕೋವಿಡ್-19ನಿಂದ ಗುಣಮುಖರಾದ ವ್ಯಕ್ತಿಯೊಬ್ಬರು ಪ್ಲಾಸ್ಮಾ ದಾನ ಮಾಡುತ್ತಿರುವುದು
ಕೋವಿಡ್-19ನಿಂದ ಗುಣಮುಖರಾದ ವ್ಯಕ್ತಿಯೊಬ್ಬರು ಪ್ಲಾಸ್ಮಾ ದಾನ ಮಾಡುತ್ತಿರುವುದು

ಮಂಗಳೂರು: ಕೋವಿಡ್-19 ಪ್ಲಾಸ್ಮಾ ಬ್ಯಾಂಕ್ ನ್ನು ಮಂಗಳೂರಿನಲ್ಲಿ ಸ್ಥಾಪಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. 
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ, ಇಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲು ಸೌಲಭ್ಯವಿದೆಯೇ ಎಂದು ಪರಿಶೀಲಿಸಲು ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಾರಿ ಮತ್ತು ಜಿಲ್ಲಾ ಸರ್ಜನ್ ಡಾ ಸದಾಶಿವ ಅವರಿಗೆ ಹೇಳಿದ್ದಾರೆ.

ಇಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಸೌಲಭ್ಯವಿದ್ದು ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೆ ಒಲವು ತೋರಿಸಿದರೆ ರಾಜ್ಯ ಸರ್ಕಾರದಿಂದ ಅನುಮತಿ ಕೇಳಲಾಗುವುದು ಎಂದರು. ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಈ ವ್ಯವಸ್ಥೆ ಅಳವಡಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ ಅನುಮತಿ ಬೇಕಾಗುತ್ತದೆ ಎಂದರು.

ಇಲ್ಲಿ ಪ್ಲಾಸ್ಮಾ ಬ್ಯಾಂಕ್ ಸೌಲಭ್ಯವಿಲ್ಲದೆ ದಾನಿಗಳು ಬೆಂಗಳೂರಿಗೆ ಹೋಗಬೇಕಾಗುತ್ತದೆ. ಇತ್ತೀಚೆಗೆ ಜೀಶಾ ಆಲಿ ಮತ್ತು ಹೈದರ್ ಆಲಿ ಎಂಬುವವರು ಪ್ಲಾಸ್ಮಾ ದಾನ ಮಾಡಲು ಬೆಂಗಳೂರಿಗೆ ಹೋದರು. ನಂತರ ಅಲ್ಲಿಂದ ಪ್ಲಾಸ್ಮಾ ತಂದು ಇಲ್ಲಿ ಇಬ್ಬರು ಕೋವಿಡ್-19 ರೋಗಿಗಳಿಗೆ ನೀಡಲಾಯಿತು, ಹೀಗಾಗಿ ಈ ಪ್ರಯಾಸವನ್ನು ತಪ್ಪಿಸಲು ಮಂಗಳೂರಿನಲ್ಲಿಯೇ ಸ್ಥಾಪಿಸಲು ನೋಡಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com