ಈ ವರ್ಷ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಲ್ಲ; ಸರ್ಕಾರದ ಕಟ್ಟುನಿಟ್ಟಿನ ಆದೇಶ

ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರು ನಗರದಲ್ಲಿ ಗಣೇಶ ಚತುರ್ದಶಿಯ ಸಾರ್ವಜನಿಕ ಆಚರಣೆ ನಡೆಯುವುದಿಲ್ಲ.
ಈ ವರ್ಷ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಲ್ಲ; ಸರ್ಕಾರದ ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರು ನಗರದಲ್ಲಿ ಗಣೇಶ ಚತುರ್ದಶಿಯ ಸಾರ್ವಜನಿಕ ಆಚರಣೆ ನಡೆಯುವುದಿಲ್ಲ.

ಸಾಂಕ್ರಾಮಿಕ ಹರಡದಂತೆ ಎಚ್ಚರವಹಿಸಲು ಸಾರ್ವಜನಿಕರು ಗುಂಪು ಸೇರುವುದನ್ನು ತಡೆಯುವುದು ಅನಿವಾರ್ಯವಾದ್ದರಿಂದ ಈ ವರ್ಷ ಸರಳ ರೀತಿಯಲ್ಲಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಯಲ್ಲಿಯೇ ಹಬ್ಬ ಆಚರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿ ವರ್ಷದಂತೆ ಈ ಬಾರಿ ರಸ್ತೆ, ಗಲ್ಲಿ, ಮೈದಾನ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳನ್ನು ಮೂರ್ತಿಯನ್ನು ವಿಸರ್ಜಿಸುವಂತಿಲ್ಲ ಎಂದು ಆದೇಶ ತಿಳಿಸಿದೆ.

ಬಿಬಿಎಂಪಿ ಈ ಸಂಬಂಧ ಮಾರ್ಗಸೂಚಿಯನ್ನು ಹೊರಡಿಸಿದ್ದು "ಮನೆ ಅಥವಾ ದೇವಾಲಯದಲ್ಲಿ ಸರಳವಾಗಿ ಗಣೇಶನ ಹಬ್ಬ ಆಚರಿಸಬೇಕು, ಯಾವ ಕಾರಣಕ್ಕೂ ಸಾರ್ವಜನಿಕ ಗಣೇಶೋತ್ಸವ ಅಥವಾ ಗಣೇಶ ವಿಸರ್ಜನೆ ಮೆರವಣಿಗೆಗೆ ಅವಕಾಶವಿಲ್ಲ. 

"ಮನೆ ಆವರಣದಲ್ಲೇ ಗಣೇಶ ವಿಸರ್ಜನೆಗೆ ಮಾತ್ರ ಅವಕಾಶ, ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. 6 ಅಡಿ ಅಂತರ ಕಾಪಾಡಿಕೊಳ್ಳಬೇಕು. ಮುಖಗವಸು ಕಡ್ಡಾಯ. ಮಾರ್ಗಸೂಚಿ ಉಲ್ಲಂಘಿಸಿದವರಿಗೆ  ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುವುದು" ಪ್ರಕಟಣೆ ಹೇಳಿದೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com