ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೋವಿಡ್ ಚಿಕಿತ್ಸೆಗೆ ಲಭ್ಯ: ಡಾ.ಸುಧಾಕರ್

ಇನ್ನೊಂದು ವಾರದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕನಿಷ್ಠ ಎರಡು ಸಾವಿರ ವೈದ್ಯರು ಹೆಚ್ಚುವರಿಯಾಗಿ ಲಭ್ಯರಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

Published: 14th August 2020 05:24 PM  |   Last Updated: 14th August 2020 06:05 PM   |  A+A-


DrSudhakar1

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್

Posted By : Nagaraja AB
Source : UNI

ಬೆಂಗಳೂರು: ಇನ್ನೊಂದು ವಾರದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕನಿಷ್ಠ ಎರಡು ಸಾವಿರ ವೈದ್ಯರು ಹೆಚ್ಚುವರಿಯಾಗಿ ಲಭ್ಯರಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಸ್ನಾತಕಸ್ನಾತಕೋತ್ತರ ವೈದ್ಯ ಪದವಿ  ಫಲಿತಾಂಶ  ಪ್ರಕಟವಾಗಲಿದ್ದು ಬಳಿಕ ಇಂಟರ್ನಿ ವಿದ್ಯಾರ್ಥಿಗಳು ಕೊರೋನಾ ಸೋಂಕಿತರ ಚಿಕಿತ್ಸೆ ನೀಡಲು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದಿದ್ದಾರೆ.

ಕೆಂಗೇರಿ ಸಮೀಪದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೋವಿಡ್-19 ಪ್ರಯೋಗಾಲಯ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ಚಾಲನೆ ನೀಡಿ  ಮಾತನಾಡಿ ಅವರು,ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತವು ಅಮೇರಿ ಕಾದಂತಹ ಮುಂದುವರಿದ  ರಾಷ್ಟ್ರಗಳಿಗಿಂತ ಉತ್ತಮ ಸಾಧನೆ ಮಾಡಿದೆ.ಆ ದೇಶಗಳಿಗಿಂತ ಸೌಲಭ್ಯಗಳ ಕೊರತೆ ಇದ್ದರೂ ಮರಣ ಪ್ರಮಾಣ ನಮ್ಮಲ್ಲಿ ಕಡಿಮೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಇದಕ್ಕೆ ಕಾರಣ ಎಂದರು.

ವೈದ್ಯರುಗಳಿಂದ ಜನರು ಹೆಚ್ಚಿನದನ್ನು ನಿರೀಕ್ಷಿಸುತ್ತಿದ್ದಾರೆ.ಇದೊಂದು ಪವಿತ್ರ ಹೊಣೆಗಾರಿಕೆಯಿರುವ ವೃತ್ತಿ ಯಾಗಿದ್ದು,ಭವಿಷ್ಯದಲ್ಲಿ ಇದರ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ವೈದ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿ ದರು.

ಆದಿಚುಂಚನಗಿರಿ ಮಠ ದೇಶಾದ್ಯಂತ ಐದುನೂರಕ್ಕೂ ಹೆಚ್ಚು ಸಂಸ್ಥೆಗಳ ಮೂಲಕ ಅಕ್ಷರ,ಅನ್ನ ಮತ್ತು ಆರೋ ಗ್ಯ ದಾಸೋಹ ನಡೆಸುತ್ತಿದೆ.ನೂರಾರು ಮಂದಿಗೆ ಆಶ್ರಯ ನೀಡಿರುವ ಜತೆಗೆ ಲಕ್ಷಾಂತರ ಮಂದಿಯ ಭವಿಷ್ಯ ರೂಪಿಸುವ ಕಾರ್ಯ ನಿರಂತರವಾಗಿ ನಡೆದುಕೊಂಡು ಬಂದಿರುವುದು ಶ್ಲಾಘನೀಯ.ಬಾಲಗಂಗಾಧರನಾಥ ಸ್ವಾಮೀಜಿಯವರ ದೂರದರ್ಶಿತ್ವ ಮತ್ತು ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಪರಿಶ್ರಮ ಈ ಶ್ರೇಯಕ್ಕೆ ಕಾರಣ ಎಂದರು.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp