74ನೇ ಸ್ವಾತಂತ್ರ್ಯ ದಿನಾಚರಣೆ: ಹಲವು ಸಮಸ್ಯೆಗಳ ನಡುವೆಯೂ ನೆರೆ, ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ

74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು. 
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು. 

ಕೊರೋನಾ ವೈರಸ್ ಸಂಕಷ್ಟದ ನಡುವೆಯು ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜ್ಯದಲ್ಲೂ ಕೂಡ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳದಿಂದ ಆಚರಿಸಲಾಗುತ್ತಿದೆ. 

ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಸವಾಲು ಎದುರಿಸುವಲ್ಲಿ ನಮ್ಮ ಸರ್ಕಾರ ಅಚಲವಾಗಿದೆ. ಒಂದು ವರ್ಷದಲ್ಲಿ ನಮಗೆ ಹಲವು ಸಮಸ್ಯೆಗಳು ಎದುರಾಗಿದ್ದು, ಸಮಸ್ಯೆಗಳ ನಡುವೆಯೂ ಅಭಿವೃದ್ಧಿ ಎಂಬ ಚಕ್ರವನ್ನು ಚಲಿಸುತ್ತಿದ್ದೇವೆ. ನೆರೆ ಹಾಗೂ ಕೊರೋನಾ ವೈರಸ್'ನ್ನು ಮೆಟ್ಟಿನಿಂತಿದ್ದೇವೆ. ಸಂಕಷ್ಟಕ್ಕೆ ಒಳಗಾದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ. ಕಾಯಕವೇ ಕೈಲಾಸ, ಸರ್ಕಾರದ ಕೆಲಸ ದೇವರ ಕೆಲ ಎನ್ನುವ ತತ್ವವನ್ನು ಪಾಲನೆ ಮಾಡುತ್ತಿದ್ದೇವೆಂದು ಹೇಳಿದರು. 

ಜನ ಸೇವೆಯೇ ಜನಾರ್ಧನ ಸೇವೆ,ಜನಹಿತ ವನ್ನು ಮನದಲ್ಲಿರಿಸಿ ಜನಪರ ತೀರ್ಮಾನಗಳನ್ನು ತೆಗೆದುಕೊಂಡಿ ದ್ದೇವೆ.ಈ ಎಲ್ಲಾ ತೀರ್ಮಾನಗ ಳಿಗೂ ನನ್ನ ರಾಜ್ಯದ ಜನರು ಸಂಪೂರ್ಣ ಬೆಂಬಲ ನೀಡಿ ಸಹಕರಿಸಿದ್ದೀರಿ.ಅದಕ್ಕಾಗಿ ನಾನು ತಮಗೆ ಅಭಾರಿಯಾಗಿದ್ದೇನೆ. ಕೋವಿಡ್-19 ಎಂಬುದು ಜಾಗತಿಕ ಪಿಡುಗಾಗಿದ್ದು ಎಲ್ಲಾ ಕ್ಷೇತ್ರಗಳನ್ನು ಬಾಧಿಸಿದೆ.ಲಾಕ್‍ಡೌನ್ ಕಾಲದಲ್ಲಿ ಮಂದಗತಿಯ ಜನ ಜೀವನ ಇಂದು ಚೇತರಿಸಿ ಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಬಾಧಿತನಾಗಿ ಇದೀಗ ವೈದ್ಯಕೀಯ ಶುಶ್ರೂಷೆಯಿಂದ ಗುಣಮುಖ ನಾಗಿರುತ್ತೇನೆ. ಜನರು ಸೋಂಕಿನ ಬಗ್ಗೆ ಆತಂಕ, ಭಯಭೀತರಾಗುವ ಅಗತ್ಯವಿಲ್ಲ.ಜಾಗರೂಕತೆಯಿಂದ ಜೀವನ ನಡೆಸಬೇಕು ಎಂದು ಅವರು ಕರೆ ನೀಡಿದರು.

ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ. 

ಕೃಷಿ ಆರ್ಥಿಕತೆಯ ಬೆನ್ನೆಲುಬಾಗಿರುವ ಸಹಕಾರ ವಲಯದಲ್ಲಿ ಸರ್ಕಾರ ಮಹತ್ತರ ಬದಲಾವಣೆಗಳನ್ನು ತಂದಿದೆ. ರೈತರು ತಾವು ಬೆಳೆದ ಬೆಳೆಗಳನ್ನು ತಮ್ಮ ಇಚ್ಚೆಯಂತೆ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನೀತಿಯಲ್ಲಿ ಮಾರ್ಪಾಡು ತರಲಾಗಿದೆ ಎಂದು ಹೇಳಿದ್ದಾರೆ.

ಕೊರೋನಾ ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡಿದ್ದೇವೆ. ಕೇವಲ ಬೆಂಗಳೂರು ನಗರವಷ್ಟೇ ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲೂ ಫೀವರ್ ಕ್ಲಿನಿಕ್ ಹಾಗೂ ಕೊರೋನಾ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಿದ್ದೇವೆ. ಆಯುಷ್ಮಾನ್ ಭಾರತ್ ಅಡಿಯಲ್ಲಿ 1 ಕೋಟಿ 30 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇವೆ. ಲಾಕ್ಡೌನ್ ನಿಂದ ಆರ್ಥಿಕ ವ್ಯವಹಾರ ಕುಸಿತ ಕಂಡಿತು. ಇದೆಲ್ಲವನ್ನೂ ದಿಟ್ಟವಾಗಿ ಎದುರಿಸಿ ವಾಣಿಜ್ಯ ಚಟುವಟಿಕೆಗಳನ್ನು ಮತ್ತೆ ಚೇತರಿಕೆ ಮಾಡುವ ಕೆಲಸ ಮಾಡಿದ್ದೇವೆ. 

ಲಾಕ್ಡೌನ್ ನಿಂದ ಅಸಂಘಟಿತ ನೆರವಿಗೆ ಸರ್ಕಾರ ಪರಿಹಾರ ನೀಡಿದೆ. 3 ಸಾವಿರ ಕೋಟಿ ಪರಿಹಾರ ನೀಡಿದ್ದೇವೆ. ಕೊರೋನಾ ವಿರುದ್ಧ ದಿಟ್ಟ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಹಗಲಿರುಳು ದುಡಿಯುತ್ತಿದ್ದು, ಕೊರೋನಾ ವಾರಿಯರ್ಸ್ ಮೃತಪಟ್ಟರೆ ರೂ.30 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕೊರೋನಾ ವಾರಿಯರ್ಸ್ ಕೂಡ ದೇಶ ಕಾಯುವ ಯೋಧರಷ್ಟೇ ಸಮರ್ಥರಾಗಿದ್ದಾರೆಂದು ಶ್ಲಾಘಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com