ಕಾಂಗ್ರೆಸ್, ಎಸ್‌ಡಿಪಿಐ ನಡುವಿನ ವೈಮನಸ್ಸು ಬೆಂಗಳೂರು ಗಲಭೆಗೆ ಕಾರಣ: ಗೃಹ ಸಚಿವ ಬೊಮ್ಮಾಯಿ

ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರ ಶಾಂತಿಗೆ ಧಕ್ಕೆಯುಂಟು ಮಾಡಲು ಎಸ್'ಡಿಪಿಐ ನಡೆಸಿದ ದೊಡ್ಡ ಪಿತೂರಿಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. 
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರ ಶಾಂತಿಗೆ ಧಕ್ಕೆಯುಂಟು ಮಾಡಲು ಎಸ್'ಡಿಪಿಐ ನಡೆಸಿದ ದೊಡ್ಡ ಪಿತೂರಿಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. 

ಬೆಂಗಳೂರು ಗಲಭೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತನಿಖಾ ಪ್ರಗತಿ ಕುರಿತು ಮಾಹಿತಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಹಾಗೂ ಎಸ್'ಡಿಪಿಐ ನಡುವಿನ ವೈಮನಸ್ಸಿನಿಂದಾಗಿ ಗಲಭೆ ಸಂಭವಿಸಿದೆ. ಮುಂಬರುವ ಬಿಬಿಎಂಪಿ ಚುನಾವಣೆಗೆ ಸಮಸ್ಯೆಯುಂಟು ಮಾಡುವ ಪ್ರಯತ್ನಗಳು ಇದಾಗಿದೆ. ಪ್ರಕರಣದಲ್ಲಿ ಈವರೆಗೂ 206 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಇದರಲ್ಲಿ 60 ಮಂದಿ ಗಲಭೆಯಲ್ಲಿ ಪಾಲ್ಗೊಂಡಿದ್ದಾರೆಂದು ಶಂಕಿಸಲಾಗಿದೆ. ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಇರ್ಷಾದ್ ಬೇಗಂ ಅವರ ಪತಿ ಕಲೀಮ್ ಪಾಷಾ ಅವರನ್ನೂ ಬಂಧಿಸಲಾಗಿದ್ದು, ಪಾಷಾ ಸೇರಿ ಮೂವರ ಹೆಸರನ್ನು ಎಫ್ಐಆರ್ ನಲ್ಲಿ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. 

ಗಲಭೆಯಲ್ಲಿ ಎಸ್'ಡಿಪಿಐ ಪಾತ್ರ ಕುರಿತು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದ ಬಳಿಕ ಸ್ಥಳೀಯ ಕಾರ್ಪೊರೇಟರ್ ಗಳ ಕೈವಾಡವಿರುವುದು ಬಹಿರಂಗಗೊಳ್ಳಲಿದೆ. ಸ್ಥಳೀಯ ಕಾರ್ಪೊರೇಟರ್ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಡುವೆ ಏರ್ಪಟ್ಟಿದ್ದ ವೈಮನಸ್ಸಿನಿಂದ ಘಟನೆ ಸಂಭವಿಸಿದೆ. ಕಳೆದ ವಿಧಾನಸಭಾ ಚುನಾವಣೆ ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಮೂಡಿದ್ದವು. ಮುಂದಿನ ಬಿಬಿಎಂಪಿ ಚುನಾವಣೆ ವೇಳೆ ಪರಿಣಾಮ ಬೀರಲು ಪಿತೂರಿ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಪೊಲೀಸರ ವಿಳಂಬ ನೀತಿಯಿಂದಾಗಿ ಘಟನೆ ಸಂಭವಿಸಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಅವರು, ರಾತ್ರಿ 8.30ರ ಸುಮಾರಿಗೆ ಹೇಳಿಕೆ ನೀಡಿದ್ದ ಪೊಲೀಸರು ನವೀನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಅಷ್ಟರಲ್ಲಾಗಲೇ ಸ್ಥಳಕ್ಕೆ ಆಗಮಿಸಿದ್ದ ಗಲಭೆಕೋರರು ನವೀನ್ ನನ್ನು ತಮ್ಮ ವಶಕ್ಕೆ ನೀಡುವಂತೆ ಆಗ್ರಹಿಸಿದ್ದರು. ಆತನನ್ನು ಸುರಕ್ಷಿತಾ ದೃಷ್ಟಿಯಿಂದಾಗಿ ಪೊಲೀಸರು ಆತನನ್ನು ಪೊಲೀಸ್ ಠಾಣೆಗೆ ಕರೆತಂದಿರಲಿಲ್ಲ ಎಂದಿದ್ದಾರೆ. 

ಇದೇ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು. ಈ ಬಗ್ಗೆ ನಾನೇನು ಹೇಳಿಕೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com