ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ; ಎಚ್.ಡಿ.ಕೆ
ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ. ಇದನ್ನು ಜತನದಿಂದ ಕಾಯ್ದುಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸಬಹುದಾದ ನಿಜ ಗೌರವ ಮತ್ತು ಅರ್ಥ ಪೂರ್ಣ
Published: 15th August 2020 09:43 AM | Last Updated: 15th August 2020 09:43 AM | A+A A-

ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಅಸಂಖ್ಯಾತ ಜನರ ನಿಸ್ವಾರ್ಥ ತ್ಯಾಗ - ಬಲಿದಾನಗಳ ಫಲವೇ ಬಹುತ್ವದ ಆತ್ಮವುಳ್ಳ ಭಾರತಕ್ಕೆ ದಕ್ಕಿದ ಸ್ವಾತಂತ್ರ್ಯ. ಇದನ್ನು ಜತನದಿಂದ ಕಾಯ್ದುಕೊಂಡು ಹೋಗುವುದೇ ಅವರಿಗೆ ನಾವು ಸಲ್ಲಿಸಬಹುದಾದ ನಿಜ ಗೌರವ ಮತ್ತು ಅರ್ಥ ಪೂರ್ಣ ಸ್ವಾತಂತ್ರ್ಯ ಸಂಭ್ರಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ". ಸಮಸ್ತ ನಾಗರಿಕರಿಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ ಎಂದು ಟ್ವೀಟ್ ಮೂಲಕ ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ್ದಾರೆ.
"ದೇಶವೆಂದರೆ ಕೇವಲ ಮಣ್ಣಲ್ಲ, ದೇಶವೆಂದರೆ ಅಲ್ಲಿನ ಜನರು, ಬಹುಸಂಸ್ಕೃತಿಯ ಮೆರವಣಿಗೆ, ಭಾವೈಕ್ಯದ ದೀವಿಗೆ". ಸಮಸ್ತ ನಾಗರಿಕರಿಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
— H D Kumaraswamy (@hd_kumaraswamy) August 14, 2020
ವ್ಯಕ್ತಿಗತ ಅಂತರದೊಂದಿಗೆ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸೋಣ.#IndependenceDay2020
2/2